ಕೊಪ್ಪಳ : ಕಬ್ಬಿಣದ ಅದಿರು ಸಾಗಿಸುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ನಡೆದಿದೆ.
ಕಬ್ಬಿಣದ ಅದಿರನ್ನು ಸಾಗಿಸುತ್ತಿದ್ದ ವೇಳೆ ಮುಂಭಾಗದಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ದುರ್ಮರಣ ಹೊಂದಿದ್ದಾರೆ.
ಇನ್ನು ಅಪಘಾತ ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುನ್ನು ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸಂಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆದರೆ ಮೃತರ ಗುರುತು ಪತ್ತೆ ಆಗಿಲ್ಲ ಎಂದು ತಿಳಿದು ಬಂದಿದೆ.




