ಜೈಪುರ: ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಅವರು ತಮಗೆ ಸಾಕಷ್ಟು ಸ್ವಾತಂತ್ರ್ಯ ನೀಡಿದ್ದಾರೆ. ಅವರು ಮೈದಾನದಲ್ಲಿ ತಮಗೆ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಲು ಅವಕಾಶ ನೀಡಿದ್ದಾರೆ ಎಂದು ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ ಹೇಳಿದ್ದಾರೆ.
ಅವರು ಕಳೆದ ರಾತ್ರಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿ ಅಂಕ ಪಟ್ಟಿಯಲ್ಲಿ ಪ್ರಥಮ ಸ್ಥಾನಗಳಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಶ್ರೇಯಸ್ ಅಯ್ಯರ ಅವರನ್ನು ಕೆಕೆಆರ್ ಆಡಳಿತ ಮಂಡಳಿ ತಂಡದಿಂದ ಕೈ ಬಿಟ್ಟ ನಂತರ ಅವರು ಪಂಜಾಬ್ ಕಿಂಗ್ಸ್ ಆಯ್ಕೆಯಾಗಿ ಈ ಬಾರಿ ತಂಡದ ನಾಯಕತ್ವವನ್ನು ವಹಿಸಿಕೊಳ್ಳುವುದರ ಜೊತೆಗೆ ವೈಯಕ್ತಿಕವಾಗಿ ಉತ್ತಮ ನಿರ್ವಹಣೆ ತೋರಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಸೋತ ನಂತರ ಸಾಕಷ್ಟು ಟೀಕೆಗೆ ಗುರಿಯಾಗಿದ್ದ ಶ್ರೇಯಸ್ ಅಯ್ಯರ ನಾಯಕನಾಗಿಯೂ ಆಟಗಾರನಾಗಿಯೂ ಉತ್ತಮ ಪ್ರದರ್ಶನ ತೋರಿ ಎಲ್ಲರ ಗಮನ ಸೆಳೆದಿದ್ದಾರೆ.




