ಯಮಕಣಮರಡಿ: ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಸತೀಶ್ ಅಣ್ಣಾ ಜಾರಕಿಹೊಳಿ ಅವರ ಅನುದಾನದಲ್ಲಿ ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ದಡ್ಡಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸಚಿವರ ಸೂಚನೆ ಮೇರೆಗೆ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಶೇಟಿಹಳ್ಳಿ ಗ್ರಾಮದಲ್ಲಿ ಸುಮಾರು 20 ಲಕ್ಷ ರೂ ವೆಚ್ಚೆದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿ ಊರಿನ ಹಿರಿಯರ ಜೊತೆಗೂಡಿ ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದ್ದರು.
ಸಲಮವಾಡ ಗ್ರಾಮದಲ್ಲಿ ಸಚಿವರ ಅನುದಾನದಲ್ಲಿ ಹಾಗೂ ನೇರಗಾ ಯೋಜನೆಯ ಅನುದಾದಡಿ ಮಂಜೂರಾದ ಅಂದಾಜು 11 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕೊಠಡಿಯನ್ನು ಉದ್ಘಾಟಿಸಿದರು.
ವರದಿ: ರಾಜು ಮುಂಡೆ




