ದೇವನಹಳ್ಳಿ : ಸಾಂಬಾರ್ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಗಲಾಟೆಯಾಗಿದ್ದು, ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ನಾಗರತ್ನ (38) ಎಂದು ಗುರುತಿಸಲಾಗಿದೆ.ಸಾಂಬಾರ್ ವಿಚಾರಕ್ಕೆ ಗಂಡ ಹೆಂಡತಿಯ ನಡುವೆ ಜಗಳವಾಗಿದೆ. ಇದರಿಂದ ಮನನೊಂದ ಮಹಿಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಆದರೆ ಮೃತಳ ತಾಯಿ, ಹಾಗೂ ಅಣ್ಣ ಮಾತ್ರ ನನ್ನ ಮಗಳದ್ದು, ಆತ್ಮಹತ್ಯೆಯಲ್ಲ ಇದೊಂದು ಕೊಲೆ.. ಹಣಕಾಸಿನ ವಿಚಾರಕ್ಕೆ ಮಗಳನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇನ್ನು ಪ್ರಕರಣಕ್ಕೆ ಪೊಲೀಸರು ತನಿಖೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.




