—————————————————-ಹಬ್ಬದ ಝಲಕ್‌ನಲ್ಲಿ ಸರ್ಕಾರಿ ಶಾಲಾ ಆರಂಭ
ಇಲಕಲ್ಲ: ನಗರದ ಹಿರಿಯ ಪ್ರಾಥಮಿಕ ಕೇಂದ್ರ ಶಾಲೆಯಲ್ಲಿ ಶಾಲಾ ದಾಖಲಾತಿ ಮತ್ತು ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಆರಂಭದ ಮೊದಲ ದಿನವೇ ಮಕ್ಕಳ ಮುಖದಲ್ಲಿ ಸಂತಸದ ನಗು ಚೆಲ್ಲಿತು.
ಶಾಲಾ ಪ್ರಾರಂಭೋತ್ಸವದ ಅಂಗವಾಗಿ, ಶಾಲೆಯ ಪರಿಸರವನ್ನು ಹಬ್ಬದ ವಾತಾವರಣದ ರೀತಿಯಲ್ಲಿ ಅಲಂಕರಿಸಲಾಗಿತ್ತು, ಇದೇ ಸಂದರ್ಭದಲ್ಲಿ ನಗರಸಭೆಯ ಸದಸ್ಯ ಶ್ರೀ ಸುರೇಶ್ ಜಂಗ್ಲಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಕ್ಕಳಿಗೆ ಪಠ್ಯಪುಸ್ತಕಗಳನ್ನು ವಿತರಿಸಿವ ಈ ಮೂಲಕ ಅವರು ಹೊಸ ಶೈಕ್ಷಣಿಕ ವರ್ಷದ ಶಾಲಾ ಆರಂಭಕ್ಕೆ ಮಕ್ಕಳನ್ನು ಬರಮಾಡಿಕೊಂಡರು.
ಈ ಸಂದರ್ಭ ಚರ್ಚಿಸಿದ ನಗರಸಭೆಯ ಸದಸ್ಯ ಸುರೇಶ ಜಂಗ್ಲಿ ಅವರು, ಶಾಲೆಯ ಸ್ವಚ್ಛತೆ, ಮೂಲಭೂತ ಸೌಕರ್ಯಗಳು ಹಾಗೂ ಇತರ ಸಮಸ್ಯೆಗಳ ಕುರಿತು ಗಮನಹರಿಸಿ, ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಮತ್ತು ಶೀಘ್ರದಲ್ಲಿ ಅವು ಬಗೆಹರಿಸಲಾಗುವುದು ಎಂಬ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಗುರುಗಳಾದ ಶ್ರೀಧರ ಜೋಗಿನ್, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.




