ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮಾನಸ ಗಂಗೋತ್ರಿ ನೀಡಲು ಇಚ್ಛಿಸಿದ್ದ ಡಾಕ್ಟರೇಟ್ ಪದವಿಯನ್ನು ಸಚಿವ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು ಸಮಾಜ ಸೇವೆಯಲ್ಲಿ ನನ್ನ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಗುರುತರ ಹೊಣೆ ನನ್ನ ಮೇಲಿದೆ ಎಂದು ಹೇಳಿದ್ದಾರೆ.
ಹೀಗಾಗಿ ನನಗೆ ಇನ್ನೂ ಹೆಚ್ಚಿನ ಕಾಲಾವಕಾಶದ ಅವಶ್ಯಕತೆಯಿದೆ. ನನ್ನ ನಿರ್ಧಾರವನ್ನು ತಾವು ಅನ್ಯಥಾ ಭಾವಿಸದೇ ಸ್ವಾಗತಿಸುತ್ತೀರೆಂದು ನಂಬಿದ್ದೇನೆ ಎಂದು ಸತೀಶ್ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ.
ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರಿಗೆ ಕರ್ನಾಟಕ ಮುಕ್ತ ವಿವಿ ಮಾ. 27 ರಂದು ಗೌರವ ಡಾಕ್ಟರೇಟ್ ಡಿ.ಲಿಟ್ ಪದವಿ ನೀಡಿತ್ತು. ಇದನ್ನು ಹಿಂಪಡೆಯುವಂತೆ ಸತೀಶ್ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾ ರೆ.




