ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವು, ನೋವಿನ ಸಂಖ್ಯೆ ಏರಿಕೆ ಆಗುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಭೀಕರ ಕಾಲ್ತುಳಿತದಲ್ಲಿ ಏಳು ಮಂದಿ ಜೀವ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದಾಗಿ ಕಾಲ್ತುಳಿತ ಸಂಭವಿಸಿ ಹಲವರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಜನಸಂದಣಿ ನಿಯಂತ್ರಿಸಲು ಯಾವುದೇ ಕ್ರಮಗಳಿಲ್ಲ. ಮೂಲಭೂತ ವ್ಯವಸ್ಥೆಗಳಿಲ್ಲ. ಕೇವಲ ಅವ್ಯವಸ್ಥೆ.
ಅಮಾಯಕ ಜನರು ಜೀವ ತೆತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೀಲ್‌ಗಳ ಶೂಟಿಂಗ್‌ನಲ್ಲಿ ಮತ್ತು ಕ್ರಿಕೆಟಿಗರೊಂದಿಗೆ ಗಮನ ಸೆಳೆಯುವಲ್ಲಿ ನಿರತರಾಗಿದ್ದಾರೆ.
ಇದು ನಾಚಿಕೆಗೇಡಿನ ಸಂಗತಿ. ಕಾಂಗ್ರೆಸ್ ಸರ್ಕಾರದ ಕೈಗಳ ಮೇಲೆ ರಕ್ತದ ಕಲೆ ಇದೆ ಎಂದು ಬಿಜೆಪಿ ಕಾಂಗ್ರೆಸ್ ಸರ್ಕಾರ ವಿರುದ್ಧ ಕಿಡಿಕಾರಿದೆ.




