Ad imageAd image

ಬೆಂಗಳೂರು ಕಾಲ್ತುಳಿತ ದುರಂತ: ಮ್ಯಾಜಿಸ್ಟ್ರೇಟ್ ತನಿಖೆಗೆ ರಾಜ್ಯ ಸರ್ಕಾರ ಆದೇಶ

Bharath Vaibhav
ಬೆಂಗಳೂರು ಕಾಲ್ತುಳಿತ ದುರಂತ: ಮ್ಯಾಜಿಸ್ಟ್ರೇಟ್ ತನಿಖೆಗೆ ರಾಜ್ಯ ಸರ್ಕಾರ ಆದೇಶ
vidhana soudha
WhatsApp Group Join Now
Telegram Group Join Now

ಬೆಂಗಳೂರು : ದಿನಾಂಕ:04.06.2025 ರಂದು ಆರ್.ಸಿ.ಬಿ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭ ನಡೆಯುವ ಸಂಧರ್ಭದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು, ಬೆಂಗಳೂರು ಇವರ ದಿನಾಂಕಂ4.06.2025ರ ವರದಿಯಲ್ಲಿ ದಿನಾಂಕ:04.06.2025 ರಂದು ಆರ್.ಸಿ.ಬಿ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭವು ನಡೆಯುವ ಸಂದರ್ಭದಲ್ಲಿ ವಿಧಾನಸೌಧದ ಮುಂಭಾಗ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾವಿರಾರು ಸಂಖ್ಯೆಯಲ್ಲಿ ಏಕಾಏಕಿ ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ್ದರು.

ಈ ಕಾರ್ಯಕ್ರಮವು ಅಲ್ಪ ಕಾಲದಲ್ಲಿ ನಿರ್ಧರಿತವಾಗಿದ್ದರಿಂದ, ತಕ್ಷಣಕ್ಕೆ ಸಾಧ್ಯವಾದ ಎಲ್ಲ ಬಂದೋಬಸ್ತ್ ವ್ಯವಸ್ಥೆಗಳನ್ನು ಏರ್ಪಡಿಸಲಾಗಿತ್ತು.

ಆದರೂ, ಏಕಾಏಕಿ ಸಾವಿರಾರು ಅಭಿಮಾನಿಗಳು ಸೇರಿದ್ದರಿಂದ ಮಧ್ಯಾಹ್ನ 3:30 ಗಂಟೆಯಿಂದ 4:30 ಗಂಟೆಯ ಸಮಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ನುಗ್ಗುವಾಗ ಬ್ಯಾರಿಕೇಡ್ ಮುರಿದು ಒಬ್ಬರ ಮೇಲೆ ಒಬ್ಬರು ಬಿದ್ದು ಉಂಟಾದ ನೂಕು ನುಗ್ಗಲಿನಿಂದ ಕಾಲ್ತುಳಿತ ಉಂಟಾಗಿದ್ದು, ಈ ಘಟನೆಯಲ್ಲಿ ಹನ್ನೊಂದು ಮಂದಿ ಮೃತರಾಗಿದ್ದಾರೆ. 47 ಮಂದಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುತ್ತಾರೆ ಎಂದು ತಿಳಿಸಿರುತ್ತಾರೆ.

ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು, ಬೆಂಗಳೂರು ರವರು ಸಲ್ಲಿಸಿರುವ ವರದಿಯನ್ನು ಸರ್ಕಾರದಲ್ಲಿ ಕೂಲಂಕುಷವಾಗಿ ಪರಿಶೀಲಿಸಿದ್ದು ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ಹಾಗೂ ಮೃತಪಟ್ಟರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ ಮತ್ತು ಈ ಪ್ರಕರಣದಲ್ಲಿ ಲೋಪ ಉಂಟಾಗಿದ್ದಲ್ಲಿ ಉಂಟಾಗಿರಬಹುದಾದ ಲೋಪಗಳ ಕುರಿತು.

ಈ ಲೋಪಕ್ಕೆ ಕಾರಣರಾದವರ ಬಗ್ಗೆ ಹಾಗೂ ನಿರ್ಲಕ್ಷ್ಯತೆಯಿಂದ ಉಂಟಾಗಿದೆಯೇ ಎಂಬ ಬಗ್ಗೆ ಸಮಗ್ರವಾಗಿ ಮ್ಯಾಜಿಸ್ಟೀರಿಯಲ್ ವಿಚಾರಣೆಯನ್ನು ನಡೆಸಲು ಸರ್ಕಾರವು ನಿರ್ಧರಿಸಿರುತ್ತದೆ. ಅದರಂತೆ ಈ ಕೆಳಕಂಡ ಆದೇಶ ಹೊರಡಿಸಿದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!