Ad imageAd image

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Bharath Vaibhav
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
WhatsApp Group Join Now
Telegram Group Join Now

ಇಲಕಲ್ : ಕಂದಗಲ್ಲ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು.ಕಂದಗಲ್ಲ ”ಮನುಷ್ಯನ ಆರೋಗ್ಯ ರಕ್ಷಣೆಗೆ ಗುಣಮಟ್ಟದ ಆಹಾರ, ಉತ್ತಮ ಹವೆ ಹಾಗೂ ಶುದ್ಧ ನೀರು ದೊರೆಯಲು ಪರಿಸರವನ್ನು ಸಂರಕ್ಷಿಸುವ ಅವಶ್ಯಕತೆ ಇದೆ” ಎಂದು ಹುನಗುಂದ ಮತಕ್ಷೇತ್ರದ ಶಾಸಕರು ಹಾಗೂ ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವ‌ರ ಹೇಳಿದರು.

ಕಂದಗಲ್ಲ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಾಲೂಕು ಆಡಳಿತ, ತಾಪಂ ಹಾಗೂ ಅರಣ್ಯ ಇಲಾಖೆ ಸಹಯೋಗದಡಿ ಹಮ್ಮಿಕೊಂಡಿದ್ದ ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು

ತಾಲೂಕು ಕಿಸಾನ ಘಟಕದ ಅಧ್ಯಕ್ಷರು ಹಾಗೂ ಪ್ರಗತಿಪರ ರೈತರಾದ ಚೆನ್ನಪ್ಪಗೌಡ ನಾಡಗೌಡ್ರ ಮು ಅಥಿತಿಗಳಾಗಿ ಆಗಮಿಸಿ ಮಾತನಾಡಿದರು.,ಮೊರಾರ್ಜಿ ಶಾಲೆಯ ಪ್ರಾಂಶುಪಾಲರಾದ ಮಲ್ಲಿಕಾರ್ಜುನ ಹತ್ತಿ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಇಲಕಲ್ಲ ಗ್ರಾಮೀಣ ಪೊಲೀಸ್ ಠಾಣೆಯ ಪಿ ಎಸ್ ಐ ಸಾಹೇಬರಾದ ಮಲ್ಲಿಕಾರ್ಜುನ ಸತ್ತಿಗೌಡರ್, ಅರಣ್ಯ ಇಲಾಖೆಯ ಅಧಿಕಾರಿಗಳು,ಕಂದಗಲ್ ಗ್ರಾಪಂ ಅಧ್ಯಕ್ಷ ಬಸವರಾಜ ಹಳ್ಕೊಳ್ಳಿ ಪಿ ಡಿ ಓ ವೀರನಗೌಡ ಮರಟಗೇರಿ, ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಚನ್ನಪ್ಪ ಜಾಲಿಹಾಳ,ಸೇರಿದಂತೆ ಕಂದಗಲ್ಲ ಮೊರಾರ್ಜಿ ಶಾಲೆಯ ಹಾಗೂ ಇತರೆ ಶಾಲೆಗಳ ಗುರುವೃಂದ ತಾಲೂಕು ಆಡಳಿತದ ಅಧಿಕಾರಿಗಳು, ಗ್ರಾಮಸ್ಥರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಪ್ರತಿಜ್ಞಾವಿಧಿ ಸ್ವೀಕರಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!