Ad imageAd image

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಕೇಸ್ : ಸಿಐಡಿ ತನಿಖೆಗೆ ಆದೇಶ 

Bharath Vaibhav
ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಕೇಸ್ : ಸಿಐಡಿ ತನಿಖೆಗೆ ಆದೇಶ 
WhatsApp Group Join Now
Telegram Group Join Now

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಫಲಿತಾಂಶವಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದಾರೆ.ಈ ಘಟನೆಯ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ಡಿಜಿ ಮತ್ತು ಐಜಿಪಿ ಆದೇಶ ಹೊರಡಿಸಿದ್ದು, ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ 11 ಅಭಿಮಾನಿಗಳ ಸಾವಿಗೆ ಕಾರಣವಾದ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಈಗಾಗಲೇ ಈ ದುರಂತದ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಈ ಬೆನ್ನಲ್ಲೇ, ಈಗ ಸಿಐಡಿ ತನಿಖೆಗೂ ಆದೇಶ ನೀಡಲಾಗಿದೆ.ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಸಿಐಡಿಯ ಅಧಿಕಾರಿಗಳ ಭೇಟಿ ನೀಡಿ, ಮಾಹಿತಿ ಪಡೆಯುವ ಸಾಧ್ಯತೆ ಇದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!