ಬೆಂಗಳೂರು: ಹೆಚ್ ಡಿ ಕುಮಾರಸ್ವಾಮಿ ಅವರಿಗೆ ನನ್ನನ್ನು ಕಂಡರೆ ಅವರಿಗೆ ಬಹಳ ಪ್ರೀತಿ. ನಮಗೂ ಅವರಿಗೂ ಬಹಳ ಲವ್ ಇದೆ. ಅದಕ್ಕೆ ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ರಾಜೀನಾಮೆ ಕೊಡೋಣ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೇಳಿದರು.
ನೀವು ರಾಜೀನಾಮೆ ನೀಡುವ ಬದಲು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂಬ ಪ್ರಶ್ನೆಗೆ ಡಿ ಕೆ ಶಿವಕುಮಾರ್ ಅವರು ಉತ್ತರಿಸಿದ್ದು, ಯಾರು ಯಾವ ಯಾವ ಸಮಯದಲ್ಲಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ಆಮೇಲೆ ಮಾತನಾಡೋಣ. ಜನಸಾಮಾನ್ಯರ ಹಿತದೃಷ್ಟಿಯಿಂದ ನಮ್ಮ ಮುಖ್ಯಮಂತ್ರಿಗಳು ಕ್ರಮ ಕೈಗೊಂಡಿದ್ದಾರೆ.
ಅವರು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಂಡಿದ್ದಾರೆ. ಯಾರೋ ತಮ್ಮ ಚಟಕ್ಕೆ ಮಾತನಾಡುತ್ತಾರೆ ಎಂದು ನಾವು ಅದನ್ನು ಕೇಳಲು ಆಗುವುದಿಲ್ಲ. ಜನ ನಮಗೆ ಆಶೀರ್ವಾದ ಮಾಡಿದ್ದು, ನಾವು ಜನರಿಗೆ ಉತ್ತರ ನೀಡುತ್ತೇವೆ ಎಂದು ಹೇಳಿದರು.




