ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ (RCB) ಐಪಿಎಲ್ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮುಗ್ಧ ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಈ ಘಟನೆಗೆ ನಟಿ ರಮ್ಯಾ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಅಧಿಕಾರಿಗಳ ಸಾಮೂಹಿಕ ವೈಫಲ್ಯ ಮತ್ತು ಯೋಜನೆಯ ಕೊರತೆಯೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.
ಅಧಿಕಾರಿಗಳ ಅಮಾನತು ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ರಮ್ಯಾ, ಈ ನಿರ್ಧಾರವನ್ನು ಯೋಚಿಸದೇ ತೆಗೆದುಕೊಂಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಆರ್‌ಸಿಬಿ ಐಪಿಎಲ್ ಕಪ್ ಗೆದ್ದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಮೃತಪಟ್ಟಿದ್ದಾರೆ.
ಈ ಘಟನೆಯ ಬಗ್ಗೆ ಇನ್‌ಸ್ಟಾಗ್ರಾಮ್ ಸ್ಟೇಟಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದ ರಮ್ಯಾ, ಸರ್ಕಾರ, ಪೊಲೀಸರು, ಕೆಎಸ್‌ಸಿಎ, ಆರ್‌ಸಿಬಿ ಮತ್ತು ಸಾರ್ವಜನಿಕರ ಸಾಮೂಹಿಕ ವೈಫಲ್ಯವೇ ಈ ದುರಂತಕ್ಕೆ ಕಾರಣ ಎಂದು ಟೀಕಿಸಿದ್ದಾರೆ.
ಆದರೆ, ಈ ಸ್ಟೇಟಸ್ ಈಗ ಇನ್‌ಸ್ಟಾಗ್ರಾಮ್‌ನಿಂದ ಕಾಣೆಯಾಗಿದ್ದು, ಅದು ಸ್ವಯಂಚಾಲಿತವಾಗಿ ಡಿಲೀಟ್ ಆಗಿರಬಹುದು ಅಥವಾ ರಮ್ಯಾ ಅವರೇ ತೆಗೆದಿರಬಹುದು ಎಂಬ ಪ್ರಶ್ನೆ ಮೂಡಿದೆ.



