ರಾಯಚೂರು : ತಾಲೂಕಿನ ಜಾಗಿರ ವೆಂಕಟಾಪುರ ಗ್ರಾಮದ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕೊಚ್ಚಿ ಹೋಗಿದೆ. ಸತತ ಎರಡು ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ಹಳ್ಳದ ಸೇತುವೆ ಕೊಚ್ಚಿ ಹೋಗಿದೆ. ಇದರಿಂದ ಫತ್ತೇಪುರ ಹಾಗೂ ಜಾಗಿರ ವೆಂಕಟಾಪುರ ಗ್ರಾಮಗಳ ನಡುವಿನ ಸಂಪರ್ಕ ಕಡಿತವಾಗಿದೆ.
ಸೇತುವೆ ಕೊಚ್ಚಿ ಹೋಗಿರುವುದರಿಂದ ಜನ ಪರದಾಡುತ್ತಿದ್ದಾರೆ. ಕಳೆದ ವರ್ಷ ಇದೇ ಸೇತುವೆ ಮೇಲೆ ಹರಿದ ಹಳ್ಳದ ನೀರಿನಲ್ಲಿ ಓರ್ವ ಬ್ಯಾಂಕ್ ಸಿಬ್ಬಂದಿ ಕೊಚ್ಚಿ ಹೋಗಿದ್ದರು. ಹೀಗಾಗಿ, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಹೊಸ ಸೇತುವೆ ಕಾಮಗಾರಿ ಆರಂಭವಾಗಿದೆ.
ಈ ಮಧ್ಯೆ ಹಳೆ ಸೇತುವೆ ಕೊಚ್ಚಿ ಹೋಗಿರುವ ಹಿನ್ನೆಲೆ ಸಂಚಾರ ಬಂದ್ ಆಗಿದೆ. ವಾಹನಗಳು ಸಂಚಾರ ಸ್ಥಗಿತವಾಗಿದ್ದರಿಂದ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.
ವರದಿ : ಗಾರಲ ದಿನ್ನಿ ವೀರನ ಗೌಡ




