ನವದೆಹಲಿ: ಕರ್ನಾಟಕದಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ದೆಹಲಿಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದರು. ಅಲ್ಲದೇ ಶೀಘ್ರವೇ ಜಾತಿಗಣತಿ ವರದಿ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದರು. ರಾಹುಲ್ ಗಾಂಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಣೆ ನೀಡಿದರು. ಮುಂದಿನ ಸಂಪುಟ ಸಭೆಯಲ್ಲಿ ಜಾರಿ ಬಗ್ಗೆ ಸಿದ್ದರಾಮಯ್ಯ ಮಾಹಿತಿ ನೀಡಿದರು. ಗಂಭೀರವಾಗಿ ಪರಿಗಣಿಸುವಂತೆ ಸಿಎಂ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸೂಚಿಸಿದರು.
ಹೀಗಾಗಿ ಕರ್ನಾಟಕದಲ್ಲಿ ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ಚರ್ಚೆ ನಡೆಸಿ, ಮಹತ್ತ್ವದ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈಗೊಳ್ಳಲಿದ್ದಾರೆ.




