Ad imageAd image

ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದತಿಗೆ ಒತ್ತಾಯಿಸಿ ಚಾಮರಾಜನಗರದಲ್ಲಿ ಪ್ರತಿಭಟನೆ

Bharath Vaibhav
ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದತಿಗೆ ಒತ್ತಾಯಿಸಿ ಚಾಮರಾಜನಗರದಲ್ಲಿ ಪ್ರತಿಭಟನೆ
WhatsApp Group Join Now
Telegram Group Join Now

ಅಮಾಯಕ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಲು ಕೆಲ್ಲಂಬಳ್ಳಿ ಸೋಮನಾಯಕ ಆಗ್ರಹ…

ಚಾಮರಾಜನಗರ:ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಸೇರಿದಂತೆ 5 ಮಂದಿ ಅಧಿಕಾರಿಗಳ  ಅಮಾನತು ಆದೇಶ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ನಾಯಕ ಜನಾಂಗದಿಂದ ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ವಾಲ್ಮೀಕಿ ನಾಯಕ ಸಮುದಾಯದ ಪ್ರಭಾವಿ ಮುಖಂಡರಾದ ಕೆಲ್ಲಂಬಳ್ಳಿ ಸೋಮನಾಯಕ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ರಾಜ್ಯ ಸರ್ಕಾರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ ಕೆಲ್ಲಂಬಳ್ಳಿ ಸೋಮನಾಯಕ ಮಾತನಾಡಿ,ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದ ಕಾಲ್ತುಳಿತ ಪ್ರಕರಣದ ನೇರ ಹೊಣೆಯನ್ನು ರಾಜ್ಯ ಸರ್ಕಾರ ಹೊತ್ತುಕೊಳ್ಳಬೇಕು. ಯಾವುದೇ ಮುನ್ಸೂಚನೆ ಇಲ್ಲದೆ ಪೊಲೀಸ್ ಅನುಮತಿ ಇಲ್ಲದೆ ಸ್ವಾರ್ಥಕ್ಕಾಗಿ ಸರ್ಕಾರ ತರಾತುರಿಯಲ್ಲಿ ಆರ್‌ಸಿಬಿ ವಿಜಯೋತ್ಸವ ಆಚರಣೆ ಮಾಡಿದ್ದು, ಕಾಲ್ತುಳಿತದಲ್ಲಿ 11 ಮಂದಿ ಅಮಾಯಕರನ್ನು ಬಲಿಪಡಿದಿದೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾಕ್ಟರ್.ಜಿ.ಪರಮೇಶ್ವರ್ ರಾಜೀನಾಮೆ ನೀಡಬೇಕು.  ರಾಜ್ಯ ಸರ್ಕಾರ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಈ ಪ್ರಕರಣದಲ್ಲಿ ಅಮಾಯಕ ಪೊಲೀಸ್ ಅಧಿಕಾರಿಗಳ ಅಮಾನತು ಪಡಿಸಿರುವುದು ಸರಿಯಲ್ಲ. ಅಧಿಕಾರಿಗಳ ಅಮಾನತು ಆದೇಶವನ್ನು ಹಿಂಪಡೆಯಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕೆಲ್ಲಂಬಳ್ಳಿ ಸೋಮನಾಯಕ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯ ಶಿವರಾಜ್, ಯಜಮಾನ ರಾಜುನಾಯಕ, ಸಂತೋಷ್, ಬುಲೆಟ್ ಚಂದ್ರು, ಚೇತು, ರಂಗಸ್ವಾಮಿ, ಚಂದು, ಬಸವರಾಜು, ಸತೀಶ್, ರಾಜು, ಶಂಕರ್‌, ಸೋಮು, ಶಿವಮೂರ್ತಿ, ಇತರರು ಭಾಗವಹಿಸಿದ್ದರು.

ವರದಿ: ಸ್ವಾಮಿ ಬಳೇಪೇಟೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!