ಬೆಂಗಳೂರು: ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಪೈಕಿ ಯುವಕ-ಯುವತಿಯರೇ ಹೆಚ್ಚಾಗಿದ್ದು, ಇದೀಗ ಬೆಂಗಳೂರಿನಲ್ಲಿ ಹಾಸನ ಮೂಲದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿಶಾಂತ್ (19) ಮೃತ ದುರ್ದೈವಿ.
ಮೃತ ನಿಶಾಂತ್ ಮೂಲತಃ ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದವರು ಎಂದು ತಿಳಿದು ಬಂದಿದೆ.ಚನ್ನಕೇಶವ ಹಾಗೂ ಜ್ಯೋತಿ ದಂಪತಿ ಪುತ್ರ ನಿಶಾಂತ್ ಕಳೆದ ಹದಿನೈದು ದಿನಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದರು.
ಡಿಪ್ಲೋಮಾ ಮುಗಿಸಿರುವ ನಿಶಾಂತ್ ಕೈಗಾರಿಕಾ ತರಬೇತಿ ಪಡೆಯಲು ಬೆಂಗಳೂರಿಗೆ ಬಂದಿದ್ದು, ಬೆಂಗಳೂರಿನ ಜೆಪಿ ನಗರದಲ್ಲಿ ವಾಸವಿದ್ದರು. ಇಂದು ರೂಂನಲ್ಲಿರುವಾಗಲೇ ಏಕಾಎಕಿ ಎದೆನೋವು ಕಾಣಿಸಿಕೊಂಡಿದ್ದು, ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಸದ್ಯ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಹುಟ್ಟೂರಿಗೆ ರವಾನಿಸಲಾಗಿದೆ. ಮಗನ ಭವಿಷ್ಯದ ಬಗ್ಗೆ ನೂರಾರು ಕನಸು ಕಂಡಿದ್ದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.




