ಅಹ್ಮದಾಬಾದ್: ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ ಕನಿಷ್ಠ 265 ಜನರು ಸಾವನ್ನಪ್ಪಿದ್ದಾರೆ.
ಬೋಯಿಂಗ್ 787-8 ಡ್ರೀಮ್ ಲೈನರ್ ವಿಮಾನವು ವೈದ್ಯಕೀಯ ಕಾಲೇಜು ಹಾಸ್ಟೆಲ್ ಗೆ ಕುಸಿದಿದ್ದು, ಭಾರಿ ಬೆಂಕಿ ಹೊತ್ತಿಕೊಂಡಿದೆ ಮತ್ತು ವಿಮಾನದಲ್ಲಿದ್ದ 242 ಜನರಲ್ಲಿ ಒಬ್ಬರು ಮಾತ್ರ ಬದುಕುಳಿದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್ ಗೆ ಆಗಮಿಸಲಿದ್ದು, ಅಪಘಾತದ ಸ್ಥಳವನ್ನು ಪರಿಶೀಲಿಸಲಿದ್ದಾರೆ ಮತ್ತು ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿರುವ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.




