ನವದೆಹಲಿ: ತಾಯಿಗೆ ಹೃದಯಾಘಾತವಾದ ಕಾರಣ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ ಇಂಗ್ಲೆಂಡ್ ನಿಂದ ವಾಪಸ್ಸಾಗಿದ್ದು, ತಾಯಿ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ತೆರಳಿ ಯೋಗ ಕ್ಷೇಮ ವಿಚಾರಿಸಿದ್ದಾರೆ.
ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿರುವ ಗಂಭೀರ ಜೂ. 12 ನಿನ್ನೆ ಭಾರತಕ್ಕೆ ಆಗಮಿಸಿದ್ದು, ಜೂನ್ 20 ರಂದು ನಡೆಯುವ ಭಾರತ- ಇಂಗ್ಲೆಂಡ್ ಟೆಸ್ಟ್ ಗೆ ಮುನ್ನ ಮತ್ತೇ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಗೊತ್ತಾಗಿದೆ.




