Ad imageAd image

ಕಾಯಲು ಬಾ ಎಂದು ಕರೆಯುತ್ತಿದ್ದ ಅಣ್ಣನೇ ಹತ್ಯೆಗೈದ ತಮ್ಮ 

Bharath Vaibhav
ಕಾಯಲು ಬಾ ಎಂದು ಕರೆಯುತ್ತಿದ್ದ ಅಣ್ಣನೇ ಹತ್ಯೆಗೈದ ತಮ್ಮ 
WhatsApp Group Join Now
Telegram Group Join Now

ಬೆಳಗಾವಿ: ಕೆಲಸಕ್ಕೆ ಹೋಗಲು ಬಿಡದೇ ಕುರಿ ಕಾಯಲು ಬಾ ಎಂದು ಕರೆಯುತ್ತಿದ್ದ ಅಣ್ಣನ ಕಾಟಕ್ಕೆ ಬೇಸತ್ತು ತಮ್ಮನೇ ಅಣ್ಣನನ್ನು ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಟ್ಟಿ ಆಲೂರಿನಲ್ಲಿ ನಡೆದಿದೆ.

ರಾಯಪ್ಪ ಸುರೇಶ್ ಕಮತಿ (28) ಕೊಲೆಯಾದ ವ್ಯಕ್ತಿ. ಬಸವರಾಜ್ ಕಮತಿ (24) ಅಣ್ಣನನ್ನೇ ಕೊಂದ ತಮ್ಮ. ಬಸವರಾಜ್ ಕಮತಿ ಕುವೈತ್ ನ್ಯಾಷನಲ್ ಪೆಟ್ರೋಲಿಯಂ ಕಂಪನಿಯಲ್ಲಿ ವಾಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ರಜೆ ಮೇಲೆ ತನ್ನ ಊರಾದ ಹಟ್ಟಿ ಆಲೂರಿಗೆ ತೆರಳಿದ್ದ. ಈ ವೇಳೆ ಅಣ್ಣ ರಾಯಪ್ಪ ಕಮತಿ, ಬಸವರಾಜ್ ಗೆ ಮತ್ತೆ ಕೆಲಸಕ್ಕೆ ಹೋಗಲು ಬಿಡದೇ ತನ್ನೊಂದಿಗೆ ಕುರಿ ಕಾಯಲು ಬಾ ಎಂದು ಕರೆಯುತ್ತಿದ್ದನಂತೆ. ಅಲ್ಲದೇ ಪ್ರತಿದಿನ ಕುರಿದೊಡ್ಡಿಯಲ್ಲಿ ಮಲಗಲು ಹೇಳುತ್ತಿದ್ದನಂತೆ. ಇದೇ ಕಾರಣಕ್ಕೆ ಸಹೋದರರ ನಡುವೆ ಗಲಾಟೆ ನಡೆದಿತ್ತು. ಇದರಿಂದ ಬೇಸತ್ತ ಬಸವರಾಜ್ ಅಣ್ಣನನ್ನೇ ಕೊಲ್ಲಲು ಪ್ಲಾನ್ ಮಾಡಿದ್ದಾನೆ.

ಅಣ್ಣ ಕುರಿ ಕಾಯಲು ಜಮೀನು ಬಳಿ ಹೋಗಿದ್ದಾಗ ಬಸವರಾಜ್ ಮನೆಯಿಂದ ಖಾರದ ಪುಡಿ ತೆಗೆದುಕೊಂಡು ಹೋಗಿದ್ದಾನೆ. ಅಣ್ಣ ಮರದ ಕೆಳಗೆ ಮೊಬೈಲ್ ನಲ್ಲಿ ರೀಲ್ಸ್ ನೋಡುತ್ತ ಕುಳಿತಿದ್ದನ್ನು ಕಂಡು ರಾಯಪ್ಪನ ಮುಖಕ್ಕೆ ಖಾರದ ಪುಡಿ ಎರಚಿ, ತಲೆಯ ಮೇಲೆ, ಮುಖದ ಮೇಲೆ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದಾನೆ. ಬಳಿಕ ತನಗೇನೂ ಗೊತ್ತಿಲ್ಲ ಎಂಬಂತೆ ಮನೆಗೆ ಬಂದಿದ್ದಾನೆ.

ಒಂದು ದಿನ ಕಳೆದರೂ ರಾಯಪ್ಪ ಮನೆಗೆ ಹಿಂದಿರುಗದಿದ್ದಾಗ ಆತಂಕಗೊಂಡ ಕುಟುಂಬದವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಸದ್ಯ ಆರೋಪಿ ಬಸವರಾಜ್ ನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಬಸವರಾಜ್ ಅಣ್ಣನನ್ನು ತಾನೇ ಕೊಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!