Ad imageAd image

ಸಚಿವ ಸತೀಶ ಜಾರಕಿಹೊಳಿ ಅವರಿಂದ ಕಾಮಗಾರಿಗಳ ಪ್ರಗತಿ ಪರಿಶೀಲನೆ

Bharath Vaibhav
ಸಚಿವ ಸತೀಶ ಜಾರಕಿಹೊಳಿ ಅವರಿಂದ ಕಾಮಗಾರಿಗಳ ಪ್ರಗತಿ ಪರಿಶೀಲನೆ
WhatsApp Group Join Now
Telegram Group Join Now

ಬೆಳಗಾವಿ: ದಿನಾಂಕ 18-06-2025 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಬೆಂಗಳೂರಿನ ವಿಕಾಸ ಸೌಧದಲ್ಲಿ ಆಯೋಜಿಸಿದ್ದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು, ಇಲಾಖೆಗೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.

ಸಭೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ರಸ್ತೆ ನಿರ್ಮಾಣ, ಸೇತುವೆ ಕಾಮಗಾರಿಗಳು, ಸಾರ್ವಜನಿಕ ಕಟ್ಟಡಗಳ ನಿರ್ಮಾಣ ಮತ್ತು ಪುನರ್ ವಸತಿ ಯೋಜನೆಗಳ ಪ್ರಗತಿ ಪರಿಶೀಲಿಸಲಾಯಿತು. ಕಾಮಗಾರಿಗಳ ಗತಿಶೀಲತೆ, ಮುಗಿಸುವ ಅವಧಿ, ಗುಣಮಟ್ಟದ ಮಾನದಂಡಗಳು ಮತ್ತು ಅನುದಾನದ ಬಳಕೆ ಕುರಿತಾದ ವಿಷಯಗಳ ಬಗ್ಗೆ ಚರ್ಚೆ ನಡೆಸಿ, ಸೂಚನೆಗಳನ್ನು ನೀಡಿದರು.

ಅಡಚಣೆಗಳಿರುವ ರಾಷ್ಟ್ರೀಯ ಮತ್ತು ರಾಜ್ಯದ ಯೋಜನೆಗಳ ಕುರಿತು ಚರ್ಚಿಸಿ, ಅವುಗಳ ತ್ವರಿತ ಪರಿಹಾರಕ್ಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಇಲಾಖೆಯ ಮುಖ್ಯಾಧಿಕಾರಿ ಹಾಗೂ ಉನ್ನತ ಅಧಿಕಾರಿಗಳು, ಮುಖ್ಯ ಇಂಜಿನಿಯರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!