ಗಾಲೆ(ಶ್ರೀಲಂಕಾ): ಪ್ರವಾಸಿ ಬಾಂಗ್ಲಾದೇಶ ಕ್ರಿಕೆಟ್ ತಂಡವು ಆತಿಥೇಯ ಶ್ರೀಲಂಕಾ ವಿರುದ್ಧ ಇಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 495 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿದೆ.
ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮೂರನೇ ದಿನದಾಟದ ಮೊದಲ ಅವಧಿಯ ಆಟ ಪ್ರಗತಿಯಲ್ಲಿದ್ದು, ಶ್ರೀಲಂಕಾ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ ವಿಕೆಟ್ ನಷ್ಟವಿಲ್ಲದೇ 47 ರನ್ ಗಳಿಸಿತ್ತು. ಪಾಥುಮಾ ನಿಶಾಂಕಾ 15 ರನ್ ಗಳಿಸಿ ಬ್ಯಾಟ್ ಮಾಡುತ್ತಿದ್ದರೆ, ಲಹಿರು ಉಡಾರಾ 29 ರನ್ ಗಳಿಸಿ ಬ್ಯಾಟ್ ಮಾಡುತ್ತಿದ್ದರು.




