ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಸರ್ಕಾರ ಮತ್ತೊಮ್ಮೆ ಶಾಕ್ ಕೊಟ್ಟಿದ್ದು,ಆಸ್ತಿ ಖರೀದಿದಾರರ ಜೇಬಿಗೆ ಕತ್ತರಿ ಬೀಳುವುದು ಕನ್ಫರ್ಮ್ ಆಗಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶೇಕಡಾ 1 ರಷ್ಟು ಸ್ಟ್ಯಾಂಪ್ ಡ್ಯೂಟಿ ಹೆಚ್ಚಿಸುವ ಮೂಲಕ ಆಸ್ತಿ ನೋಂದಣಿ, ಮಾರಾಟದ ಮೂಲಕ ಬರುತ್ತಿರುವ ಆದಾಯ ಮೂಲ ಹೆಚ್ಚಿಸಲು ಸರ್ಕಾರ ಮುಂದಾಗಿದೆ.ಈ ದರ ಹೆಚ್ಚಳದಿಂದ ಇನ್ನು ಮುಂದೆ ಆಸ್ತಿ ಖರೀದಿದಾರರು ಒಟ್ಟು ಶೇಕಡಾ 7.6ರಷ್ಟು ತೆರಿಗೆ, ಶುಲ್ಕ ಪಾವತಿಸಬೇಕಿದೆ.
ಜೂನ್ 18 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಟ್ಯಾಂಪ್ಸ್ ಹಾಗೂ ನೋಂದಣಿ ವಿಭಾಗದ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಸಭೆಯ ನಿರ್ಧಾರದಂತೆ ಆಸ್ತಿ ಖರೀದಿದಾರರು ಶೇಕಡಾ 5ರಷ್ಟು ಸ್ಟ್ಯಾಂಪ್ ಡ್ಯೂಟಿ, ಶೇಕಡಾ 1 ರಷ್ಟು ನೋಂದಣಿ ಶುಲ್ಕ, ಶೇಕಡಾ 0.5 ರಷ್ಟು ಸೆಸ್, ಶೇಕಡಾ 0.1 ರಷ್ಟು ಸರ್ಚಾರ್ಜ್ ಸೇರಿ ಒಟ್ಟು ಶೇಕಡಾ 6.6 ರಷ್ಟು ಶುಲ್ಕ ಕೊಡಬೇಕು.
ಆದರೆ ದರ ಏರಿಕೆಯಿಂದ ಇನ್ನು ಶೇಕಡಾ 7.6 ರಷ್ಟು ಪಾವತಿಸಬೇಕು. ಇದು ಆಸ್ತಿ ಖರೀದಿ ಮೊತ್ತದ ಶೇಕಡಾ 7.6 ರಷ್ಟು ಮೊತ್ತವನ್ನು ಸರ್ಕಾರಕ್ಕೆ ತೆರಿಗೆ ಹಾಗೂ ಇತರ ಶುಲ್ಕಗಳ ರೂಪದಲ್ಲಿ ಪಾವತಿಸಬೇಕಿದೆ.




