ತುಮಕೂರು: ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ತುಮಕೂರಿನಲ್ಲಿ ಸಹಕಾರ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆತ್ಮೀಯರಾದ ಕೆ.ಎನ್. ರಾಜಣ್ಣನವರ 75ನೇ ಜನ್ಮದಿನದ ಪ್ರಯುಕ್ತ ನಡೆದ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಜೊತೆಗೆ ಭಾಗವಹಿಸಿದರು.
ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಭ ಹಾರೈಸಿ, ಸಹಕಾರ ಕ್ಷೇತ್ರಕ್ಕೆ ಮತ್ತು ಪಕ್ಷಕ್ಕೆ ಅವರು ನೀಡಿರುವ ಅಮೂಲ್ಯ ಸೇವೆಗಳ ಕುರಿತು ಮಾತನಾಡಿ, ಗೌರವದ ನುಡಿಗಳು ಅರ್ಪಿಸಿದರು.
ವರದಿ: ರಾಜು ಮುಂಡೆ




