ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಇತ್ತೀಚೆಗೆ ಕ್ರೈoಸಿಟಿ ಆಗಿ ಬದಲಾಗಿದ್ದು, ಖದೀಮರು ಮನೆಗೆ ನುಗ್ಗಿ ಸಾವಿರಾರು ರೂ ಸೇರಿದಂತೆ ಚಿನ್ನಾಭರಣ ಕಳ್ಳತನ ಮಾಡಿರುವಂತಹ ಘಟನೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್‌ನ ಬಳಿಯಿರೋ ಮನೆಯೊಂದರಲ್ಲಿ ನಡೆದಿದೆ.
ಹಣ ಕಳೆದುಕೊಂಡ ಕುಟುಂಬ ಇದೀಗ ಕಂಗಾಲಾಗಿದೆ. ಸದ್ಯ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖತರ್ನಾಕ್ ಕಳ್ಳರಿಗಾಗಿ ಹುಡುಕಾಟ ನಡೆಸಿದ್ದಾರೆ.
ಶ್ರೀನಿವಾಸ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಶ್ರೀನಿವಾಸ್ ದಂಪತಿ ಕೆಲಸಕ್ಕೆ ಹೋಗಿದ್ದರೆ, ಇತ್ತ ಮಕ್ಕಳು ಕಾಲೇಜಿಗೆ ಹೋಗಿದ್ದರು.
ಇದೇ ಸಂದರ್ಭದಲ್ಲಿ ಮನೆಗೆ ನುಗ್ಗಿದ ಕಳ್ಳರು ಬಾಗಿಲು, ಬೀರು ಮುರಿದು 65 ಸಾವಿರ ರೂ ಸೇರಿದಂತೆ 5 ಗ್ರಾಂ. ಚಿನ್ನಾಭರಣ ಕಳ್ಳತನ ಮಾಡಿ ಪರಾರಿ ಆಗಿದ್ದಾರೆ.
ಸದ್ಯ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳಿಗೆ ಹುಡುಕಾಟ ನಡೆದಿದೆ. ಕಷ್ಟಪಟ್ಟು ದುಡಿದು ಹೆಣ್ಣುಮಕ್ಕಳು ಓದಿಗಾಗಿ ಹಣ ಇಟ್ಟಿದ್ದರು. ಎಲ್ಲವನ್ನೂ ದೋಚಿ ಪರಾರಿಯಾಗಿದ್ದಾರೆ.




