ಮೊಳಕಾಲ್ಮೂರು: ಮಾದಕ ದ್ರವ್ಯಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತಂತೆ ಮೊಳಕಾಲ್ಮೂರು ಪೊಲೀಸ್ ಠಾಣೆ ಹಾಗು ಚಿತ್ರದುರ್ಗ ಜಿಲ್ಲಾ ಪೊಲೀಸ್ ಸಹಯೋಗದಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಸಿಪಿಐ ವಸಂತ ವಿ ಅಸೋದೆ ಮಾತನಾಡಿ ,ಎಷ್ಟೋ ಮಕ್ಕಳು ಚಿಕ್ಕ ವಯಸ್ಸಿನಲ್ಲೇ ಮಾದಕ ವಸ್ತುಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಪ್ರತಿಯೊಬ್ಬರೂ ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಕರೆ ನೀಡಿದರು.ಮಾದಕ ವಸ್ತು ಸೇವನೆಯಿಂದಾಗಿ ಅನೇಕರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಹಾಗಾಗಿ ಇಂತಹ ದುಶ್ಚಟಗಳಿಗೆ ಯುವ ಪೀಳಿಗೆ ಯಾವುದೇ ಕಾರಣಕ್ಕೂ ದಾಸರಾಗಬಾರದು. ಮಾದಕ ವಸ್ತು ಸೇವನೆಗೆ ಪ್ರಚೋದನೆ ನೀಡುವುದು ಅಥವಾ ಮಾರಾಟ ಮಾಡುವುದು ಕಂಡು ಬಂದರೆ ಕೂಡಲೇ ನಮ್ಮ ಪೊಲೀಸ್ ಠಾಣೆಗೆ ತಿಳಿಸುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಪಟ್ಟಣದ ಪೊಲೀಸ್ ಠಾಣೆಯಿಂದ ಆರಂಭಗೊಂಡ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಅರಿವು ಮೂಡಿಸುವ ಘೋಷಣೆಗಳನ್ನು ಕೂಗುತ್ತಾ ಸಾಗಿ ಖಾಸಗಿ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಬಿಇಒ ನಿರ್ಮಲದೇವಿ ಪಟ್ಟಣದ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಹೇಶ್ ಲಕ್ಷ್ಮಣ್ ಹೊಸಪೇಟೆ ಇದ್ದರು.
ವರದಿ: ಪಿಎಂ ಗಂಗಾಧರ




