ಬೆಂಗಳೂರು: ಆಗಸ್ಟ್, ಸಪ್ಟೆಂಬರ್ ಸಮಯದಲ್ಲಿ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ ಎಂದ ಸಚಿವ ಕೆಎನ್ ರಾಜಣ್ಣ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಕೆಎನ್ ರಾಜಣ್ಣ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗುತ್ತದೆ ಎಂದು ಹೇಳಿದ್ದಾರೆ.ಆದರೆ ಇಂತಹುದೇ ಬದಲಾವಣೆ ಆಗುತ್ತದೆ ಎಂದು ಹೇಳಿಲ್ಲ. ಸಣ್ಣಪುಟ್ಟ ಬದಲಾವಣೆ ಆಗುತ್ತದೆ ಎಂದು ಹೇಳಿದ್ದಾರೆ ಅಷ್ಟೇ. ಅದನ್ನ ನೀವು ಹೇಗೆ ಬೇಕೋ ಹಾಗೆ ಬರೆದುಕೊಂಡರೆ ಹೇಗೆ? ಐ ಆಮ್ ನಾಟ್ ಎ ಜರ್ನಲಿಸ್ಟ್ ಎಂದು ಸಿದ್ದರಾಮಯ್ಯ ಮಾಧ್ಯಮದವರ ವಿರುದ್ಧ ಸಿಡುಕಿದ್ದಾರೆ.
ಸುರ್ಜೇವಾಲಾ ಅವರು ಬೆಂಗಳೂರಿಗೆ ಬರುತ್ತಿರುವುದು ನಿಜ. ಹಾಗಂತ ಪಕ್ಷದಲ್ಲಿ ಸಮಸ್ಯೆ ಇರುವ ಕಾರಣಕ್ಕೆ ಬರುತ್ತಿದ್ದಾರೆ ಎಂದರೆ ಹೇಗೆ? ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಇದೆ ಅಂತಾ ನಿಮಗೆ ಯಾರು ಹೇಳಿದ್ದು? ಎಂದು ಸಿಎಂ ಮಾಧ್ಯಮಗಳ ಮೇಲೆಯೇ ಗರಂ ಆಗಿದ್ದಾರೆ.
ಕೆಎನ್ ರಾಜಣ್ಣ ಅವರು ಆಗಸ್ಟ್, ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ ನಡೆಯಲಿದೆ. ಗಾಳಿ ತಣ್ಣಗೆ ಬೀಸುತ್ತಿದೆ. ಸೆಪ್ಟೆಂಬರ್ ಕಳೀಲಿ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದರು.




