ಯರಗಟ್ಟಿ: ನಿನ್ನೆ ದಿನಾಂಕ 27ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಶ್ರೀ ಬಸವೇಶ್ವರ ಅರ್ಬನ್ ಕೋ ಆಫ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇದರ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಮುನವಳ್ಳಿ-ಭಂಡಾರಹಳ್ಳಿ ಸೋಮಶೇಖರಮಠ ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು, ಶಾಸಕರಾದ ಮಹಾಂತೇಶ ಕೌಜಲಗಿ, ವಿಶ್ವಾಸ ವೈದ್ಯ, ಸೊಸೈಟಿ ಅಧ್ಯಕ್ಷರಾದ ಮಹಾಬಳೇಶ್ವರ ಸೋಮಪ್ಪ ಹಾದಿಮನಿ, ಸರ್ವ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ




