ತುಮಕೂರು : ಆಗಸ್ಟ್-ಸೆಪ್ಟೆಂಬರ್ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಸಹಕಾರ ಸಚಿವ ಕೆಏನ್ ರಾಜಣ್ಣ ಬಾಂಬ್ ಸಿಡಿಸಿದಿದ್ದರು.
ಇದೀಗ ಉತ್ತರ ಕರ್ನಾಟಕ ಭಾಗದ, ಎಸ್.ಟಿ ನಾಯಕ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಮಾತಾಡಿದ ರಾಜಣ್ಣ, ನಾನು ಹೇಳಿದ ಕ್ರಾಂತಿ ಏನು ಅನ್ನೋದನ್ನ ಹೇಳಿದ್ದಾರೆ. ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಆಗಬಹುದು. ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ಆಗುತ್ತದೆ. ಯಾವಾಗ ಅಂತ ಹೈಕಮಾಂಡ್ ನಿರ್ಧರಿಸುತ್ತಾರೆ ಎಂದು ಕೆ.ಎನ್ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ?
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರಾ ಎಂದು ಪ್ರಶ್ನಿಸಿದ್ದಕ್ಕೆ ಉತ್ತರಿಸಿದ ರಾಜಣ್ಣ, ‘ಡಿಕೆ ಶಿವಕುಮಾರ್ ಸಿಎಂ ಆದರೂ ಆಗಲಿ ಪಿಎಂ ಆದರು ಆಗಲಿ. ಡಿ.ಕೆ ಶಿವಕುಮಾರ್ ಸಿಎಂ ಆಗೋದು ಹೈಕಮಾಂಡ್ಗೆ ಬಿಟ್ಟ ವಿಚಾರ. ಯಾರಿಗೆ ಯಾವ ಸ್ಥಾನ ಕೊಡುತ್ತಾರೋ ಎಲ್ಲವೂ ಕೂಡ ಹೈಕಮಾಂಡ್ ಅವರ ನಿರ್ಧಾರಕ್ಕೆ ಬಿಟ್ಟಿದ್ದು’ ಎಂದರು.
ಕೇಂದ್ರದಲ್ಲೂ ಆಗಬಹುದು ಬದಲಾವಣೆ
ಕೇಂದ್ರ ಸರ್ಕಾರದಲ್ಲೂ ಸಹ ಬದಲಾವಣೆ ನಿರೀಕ್ಷೆ ಮಾಡಬಹುದು. ಆರ್ಎಸ್ಎಸ್ನವರ ಸೆಟ್ ಆಫ್ ಪ್ರಿನ್ಸಿಪಲ್ನಂತೆ 75 ವರ್ಷದ ನಂತರ ಯಾವುದೇ ಹುದ್ದೆಯಲ್ಲಿ ಇರಲಿಕ್ಕಿಲ್ಲ.
ಹಾಗಾಗಿಯೇ ಅಡ್ವಾಣಿಗೆ ಪ್ರಧಾನಿ ಸ್ಥಾನ ಸಿಕ್ಕಿಲ್ಲ. ಈಗ ಅದೇ ಪ್ರಿನ್ಸಿಪಲ್ ಮೋದಿಯವರಿಗೆ ಆಗುತ್ತದೆ. ಅದು ಒಂದು ಬದಲಾವಣೆ ಕ್ರಾಂತಿ ಅಲ್ವಾ. ಅದನ್ನು ಯಾಕೆ ನೀವು ಊಹೆ ಮಾಡೋದಿಲ್ಲ ಎಂದು ರಾಜಣ್ಣ ಪ್ರಶ್ನೆ ಮಾಡಿ ದ್ರು.




