Ad imageAd image

ಬಿಜೆಪಿಯನ್ನು ಬಿಟ್ಟು ನಾನೆಲ್ಲಿ ಹೋಗಲಿ? ನನ್ನ ಜೀವ ಇರುವುದೇ ಬಿಜೆಪಿಯಲ್ಲಿ : ಕೆ. ಎಸ್ ಈಶ್ವರಪ್ಪ 

Bharath Vaibhav
ಬಿಜೆಪಿಯನ್ನು ಬಿಟ್ಟು ನಾನೆಲ್ಲಿ ಹೋಗಲಿ? ನನ್ನ ಜೀವ ಇರುವುದೇ ಬಿಜೆಪಿಯಲ್ಲಿ : ಕೆ. ಎಸ್ ಈಶ್ವರಪ್ಪ 
ks eshwarappa
WhatsApp Group Join Now
Telegram Group Join Now

ಬಳ್ಳಾರಿ: ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳುವಂತೆ ಒತ್ತಾಯಿಸಿದ್ದನ್ನು ಮಾಧ್ಯಮದಲ್ಲಿ ನೋಡಿದ್ದೇನೆ. ಬೆಂಗಳೂರಿನಲ್ಲಿ ನಿನ್ನೆ ಬಿಜೆಪಿ ಕುರುಬ ಸಮಾಜದ ಮುಖಂಡರ ಸಭೆ ನಡೆದಿದೆ. ನನ್ನ ಮೇಲಿನ ಪ್ರೀತಿ, ವಿಶ್ವಾಸದಿಂದ ಅವರು ಮಾತನಾಡಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ವಾಪಸ್ ಬಿಜೆಪಿ ಸೇರ್ಪಡೆ ಆಗ್ತೀರಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಬಿಜೆಪಿಯನ್ನು ಬಿಟ್ಟು ನಾನೆಲ್ಲಿ ಹೋಗಲಿ? ನನ್ನ ಜೀವ ಇರುವುದೇ ಬಿಜೆಪಿಯಲ್ಲಿ ಎಂದು ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಕೆಲವು ಹಿರಿಯರು ಚರ್ಚೆ ಮಾಡಿದ್ದಾರೆ ಎಂದು ಗೊತ್ತಾಗಿದೆ. ನೋಡೋಣ, ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಪಕ್ಷದ ಹಿರಿಯ ನಾಯಕರು ಕುಳಿತು ಚರ್ಚೆ ಮಾಡೋಣ ಎಂದು ಹೇಳಿದ್ದಾರೆ ಎಂದರು.

ಈಶ್ವರಪ್ಪ ಅವರನ್ನು ಬಿಜೆಪಿಗೆ ಕರೆ ತರಲು ಹೆಚ್ಚಿನ ಒತ್ತಡವಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಬೇರೆ ಪಕ್ಷಗಳಿಂದಲೂ ಆಫರ್ ಬಂದಿತ್ತು. ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಕೂಡ ಕರೆದಿದ್ದರು. ಸಿದ್ದರಾಮಯ್ಯ ಸಂಪುಟದ ಸಚಿವರು ಕೂಡ ನನ್ನನ್ನು ಕರೆದಿದ್ದರು.

ನಾನು, ಯಡಿಯೂರಪ್ಪ, ಅನಂತ್ ಕುಮಾರ್ ಸೇರಿ ಪಕ್ಷ ಕಟ್ಟಿದ್ದೇವೆ. ಅದಕ್ಕಿಂತ ಮೊದಲು ಅನೇಕರು ಪಕ್ಷಕ್ಕಾಗಿ ರಕ್ತ ಸುರಿಸಿದ್ದಾರೆ. ಬಿಜೆಪಿ ಬಿಟ್ಟು ಬೇರೆ ಯಾವ ಪಕ್ಷಕ್ಕೂ ಹೋಗುವುದಿಲ್ಲ ಎಂದು ವಾಪಸ್ ಪಕ್ಷ ಸೇರುವ ಬಗ್ಗೆ ಈಶ್ವರಪ್ಪ ಇಂಗಿತ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!