ತಿರುಪ್ಪೂರ್: ವರದಕ್ಷಿಣೆ ಪಿಡುಗು ಇನ್ನೂ ಜೀವಂತವಾಗಿದ್ದು, ತಮಿಳುನಾಡಿ ತಿರುಪ್ಪೂರ್ ನಲ್ಲಿ ಓರ್ವ ಯುವತಿ ಪತಿಯ ಮನೆಯಲ್ಲಿ ಕಿರುಕುಳ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಏಪ್ರಿಲ್ ನಲ್ಲಿ ಕವಿನ್ ಕುಮಾರ್ (28) ಎಂಬಾತನೊಂದಿಗೆ ವಿವಾಹವಾಗಿದ್ದ ರಿಧನ್ಯಾ (27) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆಯಾಗಿದ್ದಾರೆ.
ಮೊಂಡಿಪಾಳ್ಯಂದಲ್ಲಿರುವ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತಿಳಿಸಿ, ಮಾರ್ಗಮಧ್ಯೆ ಕಾರು ನಿಲ್ಲಿಸಿ, ಕೀಟನಾಶ ಸೇವಿಸಿದ್ದಾರೆ. ಬಹಳ ಹೊತ್ತಿನಿಂದ ಒಂದೇ ಪ್ರದೇಶದಲ್ಲಿ ಕಾರು ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದಾಗ ಆಕೆಯ ಶವ ಪತ್ತೆಯಾಗಿದೆ. ಜೊತೆಗೆ ಬಾಯಿಯಲ್ಲಿ ನೊರೆ ಬಂದಿರುವುದನ್ನು ಕಂಡು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತ ಮಹಿಳೆ ಗಾರ್ಮೆಂಟ್ಸ್ ಕಂಪನಿಯನ್ನು ನಡೆಸುತ್ತಿರುವ ಅಣ್ಣಾದೊರೈ ಅವರ ಮಗಳು ಎಂದು ತಿಳಿದುಬಂದಿದೆ.




