ಮಂಡ್ಯ; ರಾಜ್ಯದಲ್ಲಿ ಸದ್ಯ ಜೆಡಿಎಸ್ ಪಕ್ಷ ಸಂಘಟನೆಯತ್ತ ಗಮನಹರಿಸಿದೆ. ರಾಜ್ಯದ ಅನೇಕ ಭಾಗಗಳಲ್ಲಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಮಾಡುತ್ತಿದೆ.
ಇಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯಲ್ಲೂ ಜೆಡಿಎಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಮಾಡಿದ್ದು, ಅದರಲ್ಲಿ ಜನರಿಗೆ ನಿಖಿಲ್ ಕುಮಾರಸ್ವಾಮಿ ಅನೇಕ ಭರವಸೆಗಳನ್ನ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಅಧಿಕಾರಕ್ಕೆ ಬಂದು ಕುಮಾರಸ್ವಾಮಿ ಸಿಎಂ ಆದರೆ ಮಹಿಳೆಯರಿಗೆ 2 ಸಾವಿರ ಅಲ್ಲ, ತಿಂಗಳಿಗೆ 5 ಸಾವಿರ ಕೊಡುತ್ತೇವೆ ಎಂದು ನಿಖಿಲ್ ಘೋಷಣೆ ಮಾಡಿದ್ದಾರೆ ಅಲ್ಲದೇ, ಈ ಯೋಜನೆಯಿಂದ ರಾಜ್ಯ ಸರ್ಕಾರದ ಅಭಿವೃದ್ಧಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ .




