ಬುಲಾವಾಯೋ ( ಜಿಂಬಾಬ್ವೆ): ಪ್ರವಾಸಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧ ಇಲ್ಲಿ ನಡೆದ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ 328 ರನ್ ಗಳ ದೊಡ್ಡ ಗೆಲುವು ಸಾಧಿಸಿದೆ.
ಇಲ್ಲಿನ ಕ್ವೀನ್ಸ್ ಸ್ಪೋಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್ ನಲ್ಲಿ 418 ಕ್ಕೆ 9 ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ 369 ರನ್ ಗಳಿಸಿತು. ಜಿಂಬಾಬ್ವೆ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 251 ರನ್ ಗಳಿಸಿದರೆ ದ್ವಿತೀಯ ಇನ್ನಿಂಗ್ಸ್ ನಲ್ಲಿ 208 ರನ್ ಗಳನ್ನು ಗಳಿಸಲು ಸಾಧ್ಯವಾಯಿತು. ಹೀಗಾಗಿ ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯವನ್ನು 328 ರನ್ ಗಳ ಬೃಹತ್ ಅಂತರದಲ್ಲಿ ಗೆದ್ದು ಟೆಸ್ಟ್ ಸರಣಿಯಲ್ಲಿ 1-0 ರ ಮುನ್ನಡೆ ಪಡೆಯಿತು.
——————————————————————————-ಪಂದ್ಯ ಶ್ರೇಷ್ಠ: ಹುಆನ್ ಡ್ರೆ ಪ್ರಿಟೋರಿಯಸ್




