Ad imageAd image

ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ಜೋರಾಗಲಿದೆ: ಬಿ.ವೈ.ವಿಜಯೇಂದ್ರ

Bharath Vaibhav
ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ಜೋರಾಗಲಿದೆ: ಬಿ.ವೈ.ವಿಜಯೇಂದ್ರ
WhatsApp Group Join Now
Telegram Group Join Now

ಬೆಂಗಳೂರು: ಸಿದ್ದರಾಮಯ್ಯನವರ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರ್ಜೆವಾಲಾ ಅವರು ಕರ್ನಾಟಕದಲ್ಲಿ ಬೀಡುಬಿಟ್ಟಿದ್ದಾರ, ರಾಜ್ಯದ ಭ್ರಷ್ಟ ಸರಕಾರ ನೆಲಕಚ್ಚಿದ ಬಗ್ಗೆ ಅವರು ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು. ಸುರ್ಜೇವಾಲಾ ಅವರು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ಜೋರಾಗಲಿದೆ ಎಂದು ವಿಶ್ಲೇಷಿಸಿದರು.

ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಅವರು ಡಿಜೆಪಿಯವರಿಗೆ 100 ಜನ ಶಾಸಕರ ಬೆಂಬಲ ಇದೆ, ಅವರು ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ಶಾಸಕರಾದ ಬಿ.ಆರ್.ಪಾಟೀಲ್, ರಾಜು ಕಾಗೆಯವರು ಸೇರಿ ಬೇರೆ ಬೇರೆ ಶಾಸಕರು ಮುಖ್ಯ ಮಂತ್ರಿಗಳ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಅವರ ವಾದ ಜಾಗಕರ ವಿನ್ಯಾಸವನ್ನೂ ಕಳಕೊಂಡಿದ್ದಾರೆ ಎಂದರು. ಕುದುರೆ ವ್ಯಾಪಾರದ ಬಗ್ಗೆ ಮಾನ್ಯ ರಾಜ್ಯಪಾಲರೂ ಗಮನಿಸಬೇಕು ಎಂದು ವಿನಂತಿಸಿದರು.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!