ಬೆಂಗಳೂರು : ರಾಜ್ಯ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಅವ್ಯಚ ಶಬ್ದಗಳಿಂದ ಮಾತಾಡಿದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು
ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರಕಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯಾಧ್ಯಕ್ಷ ಮಹೇಶ್ ಸಿ ಹುಬಳ್ಳಿ ಅವರು ಒತ್ತಾಯಿಸಿದ್ದಾರೆ.
ಚಿಂತಕರು ಬುದ್ದಿಜೀವಿಗಳು ವಿಚಾರವಂತರಿಗೆ ವಿಧಾನ ಪರಿಷತ್ ಸದಸ್ಯರ ಆಯ್ಕೆ ಮಾಡುತ್ತಾರೆ. ರವಿಕುಮಾರ್ ಒಬ್ಬ ವಿಧಾನ ಪರಿಷತ್ ಸದಸ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಏಕವಚನದಲ್ಲಿ ಅವ್ಯಚ್ ಶಬ್ದಗಳಿಂದ ಬೈದಿದ್ದು ಸರ್ಕಾರ ನೌಕರರಿಗೆ ಮುಜುಗರ ಉಂಟು ಮಾಡಿದೆ ಎಕೆಂದರೆ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಸರ್ಕಾರಿ ದೊಡ್ಡ ಸ್ಥಾನದಲ್ಲಿ ಇದ್ದ ರಾಜ್ಯ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಅವಹೇಳನಕಾರಿ ಮಾತನಾಡಿದ ಮೇಲೆ ಉಳಿದ ಸರ್ಕಾರಿ ನೌಕರರು ಕೆಲಸ ಮಾಡುವುದು ಹೇಗೆ ಇಂತಹ ನೀಚ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ರಾಜ್ಯಾಧ್ಯಕ್ಷ ಮಹೇಶ್ ಸಿ ಹುಬಳ್ಳಿ ಆಗ್ರಹಿಸಿದ್ದಾರೆ.

ಇದೆ ವೇಳೆ ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯಾಧ್ಯಕ್ಷ ಮಹೇಶ್ ಸಿ ಹುಬಳ್ಳಿ ಅವರಿಗೆ ರಾಜ್ಯ, ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಸದಸ್ಯರು ಸಾಥ್ ನೀಡಿದ್ದಾರೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್ ಜಡಗಿ ತಿಳಿಸಿದ್ದಾರೆ.
ವರದಿ: ಅಯ್ಯಣ್ಣ ಮಾಸ್ಟರ್




