ಕಾರವಾರ: ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಲವೆಡೆ ಭೂಕುಸಿತ ಸಂಭವಿಸಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಕರ್ನಾಟಕ-ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ ಬಳಿ ಘಟನೆ ನಡೆದಿದೆ.
ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ರಸ್ತೆ ಮಾರ್ಗದಲ್ಲಿಯೂ ಬಿರುಕುವುಂಟಾಗಿದೆ. ನಿಧಾನಗತಿಯಲ್ಲಿ ವಾಹನಗಳು ತೆರಳಲು ಅನುವು ಮಾಡಿಕೊಡಲಾಗಿದೆ. ಕರ್ನಾಟಕ ಹಾಗೂ ಗೋವಾ ಪೊಲೀಸರು ಸ್ಥಳಕ್ಕೆ ಭೇತಿ ನೀಡಿ ಪರಿಶೀಲನೆ ನಡೆಸಿದ್ದಾರೆ.




