ಹುಮನಾಬಾದ : ಅಲೆಮಾರಿ ಸುಡುಗಾಡು ಸಿದ್ಧರ ಸಮಾಜ ಸಂಘದಿಂದ ದಿ.ಇಂದು ಜೂಲೈ 9 ರಂದು ಹುಡಗಿ ಗ್ರಾಮದ ನಿಸರ್ಗ ಕಲ್ಯಾಣ ಮಂಟಪದಲ್ಲಿ 12:30ಗಂಟೆಗೆ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಹನುಮಂತ ಕಡಮಂಚಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ,ಪೌರಾಡಳಿತ ಸಚಿವ ರಹೀಂ ಖಾನ್,ಕರ್ನಾಟಕ ಅಲೆಮಾರಿ ಅಭಿವೃದ್ಧಿ ನಿಗದ ಅಧ್ಯಕ್ಷೆ ಪಲ್ಲವಿ.ಜಿ. ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ,ಮಾಜಿ ಸಚಿವ ರಾಜಶೇಖರ ಪಾಟೀಲ,ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.ಹೀಗಾಗಿ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಮನವಿ ಮಾಡಿದರು.




