ತುರುವೇಕೆರೆ : 2025-26 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಗೆ ಶೇ.. 90 ರ ರಿಯಾಯಿತಿ ದರದಲ್ಲಿ ತುಂತುರು ನೀರಾವರಿ ಘಟಕಗಳನ್ನು ನೀಡುತ್ತಿದ್ದು, ರೈತರು ನಿಗದಿತ ಹಣವನ್ನು ಪಾವತಿಸಿ ಪಡೆಯಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕಿ ಪೂಜಾ ತಿಳಿಸಿದ್ದಾರೆ.
ಆಸಕ್ತಿಯುಳ್ಳ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ತೆರಳಿ, ಅರ್ಜಿಯೊಂದಿಗೆ ಫಹಣಿ, ಆಧಾರ್ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ನಕಲು, 100 ರೂ ಛಾಪಾಕಾಗದ, ಭಾವಚಿತ್ರ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಹಾಗೂ ಬೆಳೆ ದೃಢೀಕರಣ ಪತ್ರ ಹಾಗೂ ನೀರಿನ ಹಕ್ಕಿನ ಪತ್ರದ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ತುರುವೇಕೆರೆ ಕೃಷಿ ಇಲಾಖೆ ಹಾಗೂ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಲು ಕೋರಿದ್ದಾರೆ.
ವರದಿ: ಗಿರೀಶ್ ಕೆ ಭಟ್, ತುರುವೇಕೆರೆ




