ಗೋಕಾಕ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕರ್ನಾಟಕ ಘನ ಸರ್ಕಾರದ ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣಿಕರು ಪ್ರಯಾಣ ಮಾಡಿದ ಹಿನ್ನೆಲೆಯಲ್ಲಿ ವಾಕರಸಾಸಂ ಗೋಕಾಕ ವತಿಯಿಂದ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಡಾ. ಮಹಾಂತೇಶ ಅಣ್ಣಾ ಕಡಾಡಿಯವರ ನೇತೃತ್ವದಲ್ಲಿ ಪ್ರಯಾಣಿಕರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಈ ಸಮಾರಂಭದಲ್ಲಿ ಮಾತನಾಡಿದ ಡಾ ಕಡಾಡಿಯವರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮೂಲಕ ಬಡ ಜನರಿಗೆ ನಮ್ಮ ಸರ್ಕಾರ ಅನುಕೂಲ ಮಾಡಿಕೊಟ್ಟಿದೆ, ಅದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. ಐದು ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆಯು ಹೆಚ್ಚು ಜನರಿಗೆ ಮುಟ್ಟಿದೆ ಎಂದು ಅಭಿಪ್ರಾಯಪಟ್ಟರು. ಇಲ್ಲಿಯವರೆಗೆ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಿದ ಅನುದಾನದ ವಿವರವನ್ನು ಅಂಕಿ ಸಂಖ್ಯೆ ಸಮೇತ ಸಾರ್ವಜನಿಕರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಗೋಕಾಕ ಸಾರಿಗೆ ಇಲಾಖೆ ಘಟಕ ವ್ಯವಸ್ಥಾಪಕ ಸುನೀಲ್ ಹೊನವಾಡ, ಕಾಂಗ್ರೆಸ್ ಮುಖಂಡರಾದ ಅಶೋಕ್ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಾಕೀರ್ ನದಾಫ್, ನಗರ ಯೋಜನಾ ಪ್ರಾಧಿಕಾರದ ಸದಸ್ಯರಾದ ಮಾಯಪ್ಪ ತಹಶೀಲ್ದಾರ್ ಸೇರಿದಂತೆ ಗ್ಯಾರಂಟಿ ಸಮಿತಿ ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು, ಸಾರಿಗೆ ಸಿಬ್ಬಂದಿ ಹಾಗೂ ಪ್ರಯಾಣಿಕರು ಉಪಸ್ಥಿತರಿದ್ದರು.




