ಬೆಂಗಳೂರು : 500 ನೇ ಕೋಟಿ ಶಕ್ತಿ ಟಿಕೇಟ್ ಪಡೆದಮಹಿಳೆಗೆ ಸಿಎಂ ಸಿದ್ದರಾಮಯ್ಯ ಶಾಲು ಹೊದಿಸಿ, ಹಾರ ಹಾಕಿ ,ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಶಕ್ತಿ ಯೋಜನೆಯು ದಿನಾಂಕ 11-06-2023 ರಿಂದ ಜಾರಿಗೆ ಬಂದಿದ್ದು, ಜುಲೈ 14 ನೇ 2025 ಕ್ಕೆ 500 ಕೋಟಿ ಮಹಿಳಾ ಪ್ರಯಾಣಿಕರ ಟ್ರಿಪ್ ಅನ್ನು ತಲುಪುವ ಮುಖಾಂತರ ದೇಶದಲ್ಲೇ ಹೊಸ ಮೈಲಿಗಲ್ಲನ್ನು ತಲುಪಲಿದೆ.
ಮುಂದುವರೆದು, ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಲಾಗುತ್ತಿರುವುದಿಂದ ಮಹಿಳೆಯರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ, ಆರೋಗ್ಯ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ.
ಶಕ್ತಿ ಯೋಜನೆಯು ಅಭೂತಪೂರ್ವ ಯಶಸ್ಸನ್ನು ಕಂಡು ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಯೋಜನೆಯಾಗಿ ಮುಂದುವರೆಯುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ 500 ನೇ ಕೋಟಿ ಟಿಕೇಟ್ ಅನ್ನು ಸಾಂಕೇತಿಕವಾಗಿ ಇಂದು ವಿತರಿಸಿದ್ದು, ಶಕ್ತಿ ಯೋಜನೆಯಲ್ಲಿ ಇಲ್ಲಿಯವರೆಗೂ ರೂ.12669 ಕೋಟಿ ಮಹಿಳಾ ಟಿಕೇಟ್ ಮೌಲ್ಯ. ನಗರ, ಸಾಮಾನ್ಯ, ವೇಗದೂತ ಬಸ್ಸುಗಳಲ್ಲಿ ರಾಜ್ಯದ್ಯಾಂತ ರಾಜ್ಯದ ನಿವಾಸಿಗಳಾ ಎಲ್ಲಾ ಮಹಿಳೆಯರು, ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.




