ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಅವರನ್ನು ನೇಮಿಸಿ ಕೇಂದ್ರ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ.
ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಕೆಳಗಿನ ನ್ಯಾಯಾಧೀಶರನ್ನು ವಿವಿಧ ಹೈಕೋರ್ಟ್ಗಳ ಮುಖ್ಯ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲಾಗಿದೆ.
ದೆಹಲಿ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ, ಮಧ್ಯಪ್ರದೇಶ ಹೈಕೋರ್ಟ್ ಗೆ ನ್ಯಾಯಾಧೀಶರಾದ ನ್ಯಾಯಮೂರ್ತಿ ಸಂಜೀವ್ ಸಚ್ದೇವ, ನ್ಯಾಯಮೂರ್ತಿ ವಿಪುಲ್ ಮನುಭಾಯಿ ಪಂಚೋಲಿ ಅವರನ್ನು ಪಾಟ್ನಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ, ಪಾಟ್ನಾ ಹೈಕೋರ್ಟ್ನ ನ್ಯಾಯಮೂರ್ತಿ ಅಶುತೋಷ್ ಕುಮಾರ್ ಅವರನ್ನು ಗುವಾಹಟಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಇನ್ನು ಹಿಮಾಚಲ ಪ್ರದೇಶ ಹೈಕೋರ್ಟ್ನ ನ್ಯಾಯಾಧೀಶರಾದ ನ್ಯಾಯಮೂರ್ತಿ ತರ್ಲೋಕ್ ಸಿಂಗ್ ಚೌಹಾಣ್ ಅವರನ್ನು ಜಾರ್ಖಂಡ್ ಹೈಕೋರ್ಟ್ನ ಮುಖ್ಯ ನ್ಯಾಯ ಮೂರ್ತಿಯಾಗಿ ನೇಮಿಸಲಾಗಿದೆ ಎಂದು ಕೇಂದ್ರ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಮೇ ತಿಂಗಳಲ್ಲಿ ಸುಪ್ರೀಂ ಕೊರ್ಟ್ ಕೊಲಿಜಿಯಂ ಈ ನೇಮಕಾತಿಯ ಕುರಿತಾಗಿ ಶಿಫಾರಸು ಮಾಡಿತ್ತು.




