ಬೆಂಗಳೂರು : ಪರಿಶಿಷ್ಟ ವರ್ಗಗಳ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿ ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸವಾಲು ಹಾಕಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಎ.ಪಿ.ಜೆ ಅಬ್ದುಲ್ ಕಲಾಂರನ್ನು ರಾಷ್ಟ್ರಪತಿಗಳಾಗಿ ಮಾಡಿತ್ತು. ಇದು ಕಾಂಗ್ರೆಸ್ ಪಕ್ಷದವರು ಮಾಡಿದ್ದಲ್ಲ. ಇಡೀ ದೇಶದಲ್ಲಿ 6 ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡದ ಬಿಜೆಪಿಯ ಮುಖ್ಯಮಂತ್ರಿಗಳಿದ್ದಾರೆ. ನಾಲ್ಕು ರಾಜ್ಯಗಳಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದವರು ಮುನ್ನಡೆಸುತ್ತಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.
ಸಿದ್ದರಾಮಯ್ಯನವರು, ಬಿಜೆಪಿ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ವಿರೋಧಿ, ಅಲ್ಪಸಂಖ್ಯಾತರ ವಿರೋಧಿ ಎಂದು ಬಿಂಬಿಸುವ ಕೆಲಸ ಮಾಡಿದ್ದಾರೆ. ಮಾನ್ಯ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಬುಡಕಟ್ಟು ಸಮುದಾಯಕ್ಕೆ ಸೇರಿದವರು ಎಂಬುದನ್ನು ಸಿದ್ದರಾಮಯ್ಯ ಮರೆಯಬಾರದು ಎಂದು ಹೇಳಿದರು.




