ಸೇಡಂ:ತಾಲೂಕಿನ ಬೀರನಹಳ್ಳಿ ಮತ್ತು ಬೊಮ್ಮನಹಳ್ಳಿ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸುವ ಮಳೆಗಾಲ ಬಂದರೆ ರಸ್ತೆ ಮೇಲೆ ನೀರು ನಿಂತು ಕೆಸರು ಗದ್ದೆಯಂತೆ ಆಗುತ್ತಿದ್ದು ಎರಡು ಗ್ರಾಮಗಳ ರೈತರಿಗೆ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ತಾಲೂಕ ಮಟ್ಟದ ಅಧಿಕಾರಿಗಳು ಹಾಗೂ ಮಾನ್ಯ ಸಚಿವರು ಇತ್ತ ಗಮನಹರಿಸಿ ನಮ್ಮ ಹೊಲ ನಮ್ಮ ದಾರಿ ಯೋಜನೆ ಅಡಿ ರಸ್ತೆ ಅಭಿವೃದ್ಧಿಗೊಳಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾ ಪತ್ರಿಕಾ ಮಾಧ್ಯಮ ಸಂಚಾಲಕರಾದ ಗುಂಡಪ್ಪ ಪೂಜಾರಿ ಬೀರನಹಳ್ಳಿ ಅವರು ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




