Ad imageAd image

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ  ಸಮಿತಿ ವತಿಯಿಂದ ಪ್ರತಿಭಟನಾ ಧರಣಿ

Bharath Vaibhav
ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ  ಸಮಿತಿ ವತಿಯಿಂದ ಪ್ರತಿಭಟನಾ ಧರಣಿ
WhatsApp Group Join Now
Telegram Group Join Now

ಕಾಳಗಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ, ರಾಜ್ಯ ಸಮಿತಿ ಆದೇಶದ ಮೇರೆಗೆ ತಾಲೂಕು ಸಮಿತಿ ಕಾಳಗಿ ವತಿಯಿಂದ ದಲಿತರ- ಭೂಮಿ ವಸತಿ ಹಕ್ಕಿಗಾಗಿ ಮತ್ತು ಇತರೆ ಹಾಕ್ಕೋತ್ತಾಯಗಳಿಗೆ ಆಗ್ರಹಿಸಿ ಶುಕ್ರವಾರ ತಹಸೀಲ್ದಾರ್ ಕಾರ್ಯಾಲಯ ಎದುರುಗಡೆ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಯಿತು, ಈ ವೇಳೆಯಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಬಾಬುರಾವ ಶೇಳ್ಳಗಿ ಅವರು ಮಾತನಾಡಿ ಪರಿಶಿಷ್ಟ ಜಾತಿ / ವರ್ಗ ಹಾಗೂ ಭೂಹೀನ ತಳ ಸಮುದಾಯಗಳು ಉಳುಮೆ ಮಾಡುತ್ತಿರುವ ಭಗರ್ ಹುಕುಂ ಸಾಗುವಳಿ ದರಖಾಸ್ತು ಮಂಜೂರಾತಿ ಸಕ್ರಮಿಕರಣ ಕಾಲಮಿತಿಯೊಳಗೆ ಇತ್ಯಾರ್ಥಗೊಳಿಸಬೇಕು, ವಿನಾಕಾರಣ ವಜಾಗೊಳಿಸುವ ಭಗರ ಹುಕುಂ ಸಾಗುವಳಿ ಅರ್ಜಿಗಳನ್ನು ಮರುಪರಿಶೀಲಿಸಬೇಕು, ಪರಿಶಿಷ್ಟ ಪಿಟಿಸಿ ಎಲ್ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯನ್ನು ಮಾನ್ಯ ಮಾಡದ ಕಂದಾಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು, ಹೈ ಕೋರ್ಟ್ಗಳಲ್ಲಿ ಪಿಟಿಸಿಎಲ್ ಪ್ರಕರಣಗಳು ವಜಾಗೊಳಿಸುತ್ತಿದ್ದು, ನುರಿತ ಹಿರಿಯ ವಕೀಲರನ್ನು ನೇಮಿಸಿ ಈ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಬೇಕು,ಎಂದು ಅನೇಕ ಹಾಕೋತ್ತಾಯದ ಕುರಿತು ಮಾತನಾಡಿದರು .

ಈ ಸಂಧರ್ಭದಲ್ಲಿ ಮಲ್ಲಿಕಾರ್ಜುನ ಗವ್ಹಾರ್ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಕಾಳಗಿ ಸಂಚಾಲಕರು ಭಗರ್ ಹುಕುಂ ಸಾಗುವಳಿ ಮಾಡಿದ ರೈತರು 54,53,&57 ಅರ್ಜಿ ಸಲ್ಲಿಸಿರುವ ಎಲ್ಲಾ ರೈತರಿಗೆ, ಹಾಗೂ ದಲಿತ ತಳ ಸಮುದಾಯಗಳ ಸುಮಾರು 20- 30 ವರ್ಷಗಳಿಂದ ಸಾಗುವಳಿ ಮಾಡಿದ ಎಲ್ಲಾ ರೈತರಿಗೆ ಹಕ್ಕು ಪತ್ರ ವಿತರಣೆ ಮಾಡಬೇಕು ಎಂದು ಪ್ರತಿಭಟನಾ ಧರಣಿಯಲ್ಲಿ ತಿಳಿಸಿದರು, ನಂತರ ತಹಸೀಲ್ದಾರ್ ರವರಿಗೆ ಮನವಿ ಪತ್ರ ನೀಡಲಾಯಿತು ,ಈ ಸಂದರ್ಭದಲ್ಲಿ: ತಾಲೂಕ ಸಂಘಟನಾ ಸಂಚಾಲಕರುಗಳು ಮತ್ತು ರೈತರು, ಈ ಪ್ರತಿಭಟನಾ ಧರಣಿಯಲ್ಲಿ ಭಾಗಿಯಾಗಿದ್ದರು.

ವರದಿ : ಹಣಮಂತ ಕುಡಹಳ್ಳಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!