ಬೆಂಗಳೂರು : ರಸ್ತೆ ಬದಿ ನಿಂತಿದ್ದವರ ಮೇಲೆ ಬಿಎಂಟಿಸಿ ಬಸ್ ಹರಿದು ಯುವತಿಯೋಬ್ಬಳು ಮೃತ ಪಟ್ಟಿದ್ದು ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಪೀಣ್ಯ 2ನೇ ಹಂತದಲ್ಲಿ ನಡೆದಿದೆ.
ಬೆಳಿಗ್ಗೆ 8-45ರ ಸುಮಾರಿನಲ್ಲಿ ಪೀಣ್ಯ 2ನೇ ಹಂತದ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ವೇಗವಾಗಿ ಬಂದು ಏಕಾಏಕಿ ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದಿದೆ. ಈ ವೇಳೆ ಒಂದು ಮಗು ಸೇರಿ ಐವರು ಗಂಭೀರವಾಗಿ ಗಾಯಗೊಂಡಿದ್ದು ಸುಮಾ ಎಂಬ 25 ವರ್ಷದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ವೇಗವಾಗಿ ಬಂದ ಬಸ್ ಐವರಿಗೆ ಡಿಕ್ಕಿ ಹೊಡೆದು ನಂತರ ರಸ್ತೆ ಬದಿಯಲ್ಲಿದ್ದ ಕ್ಯಾಂಟಿನ್ ಗೆ ಡಿಕ್ಕಿ ಹೊಡೆದಿದೆ ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,ಚಿ ಚಿಕಿತ್ಸೆ ಮುಂದುವರದೆ, ಮತ್ತೋರ್ವ ಮಹಿಳೆಯ ಕಾಲು ಮುರಿದಿದ್ದು , ಇನ್ನೋರ್ವ ವ್ಯಕ್ತಿಗೆ ಸಣ್ಣ ಪುಟ್ಟ ಗಾಯಗಳಾಗಿವೆ, ಚಾಲಕನ ಬದಲು ನಿರ್ವಾಹಕ ಚಾಲನೆ ಮಾಡಿದ ಕಾರಣಕ್ಕೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತದೆ.
ಘಟನೆಯ ಸ್ಥಳಕ್ಕೆ ಬಿಎಂಟಿಸಿ ಅಧಿಕಾರಿಗಳು ಮತ್ತು ಪೋಲಿಸ್ ರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ವರದಿ: ಅಯ್ಯಣ್ಣ ಮಾಸ್ಟರ್




