ಹರಾರೆ: ಜಿಂಬಾಬ್ವೆ ಪ್ರವಾಸ ಕೈಗೊಂಡಿರುವ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಆತಿಥೇಯ ತಂಡದ ವಿರುದ್ಧ ಇಲ್ಲಿ ನಡೆದ ಮೂರನೇ ಟ್ವೆಂಟಿ-20 ಕ್ರಿಕೆಟ್ ಪಂದ್ಯದಲ್ಲಿ 8 ವಿಕೆಟ್ ಗಳ ಸುಲಭ ಗೆಲುವು ದಾಖಲಿಸಿದೆ.
ಇಲ್ಲಿನ ಹರಾರೆ ಸ್ಪೋಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡ 7 ವಿಕೆಟ್ ಗೆ 120 ರನ್ ಗಳ ಅಲ್ಪ ಮೊತ್ತ ದಾಖಲಿಸಿತು. ಇದಕ್ಕೆ ಪ್ರತಿಯಾಗಿ ಆಡಿದ ನ್ಯೂಜಿಲೆಂಡ್ 13.5 ಓವರುಗಳಲ್ಲಿ ಕೇವಲ 2 ವಿಕೆಟ್ ಗಳ ನಷ್ಟದಲ್ಲಿ 122 ರನ್ ಗಳಿಸಿ ನಿರಾಯಾಸವಾಗಿ ಪಂದ್ಯ ಗೆದ್ದುಕೊಂಡಿತು. ನ್ಯೂಜಿಲೆಂಡ್ ಪರವಾಗಿ 40 ಎಸೆತಗಳಲ್ಲಿ 59 ರನ್ ಗಳಿಸಿದ ಡೆವನ್ ಕಾನ್ವೆ ಪಂದ್ಯ ಶ್ರೇಷ್ಠ ಗೌರವ ಪಡೆದರು.




