ಬೆಂಗಳೂರು : ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ ಮಾಡಿದರು.
ಇಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.
ಇನ್ನು ವಿಭು ಬಖ್ರು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಿದ್ದರಾಮಯ್ಯ ಪಾಲ್ಗೊಂಡು, ನೂತನ ನ್ಯಾಯಮೂರ್ತಿಗಳಿಗೆ ಶುಭ ಕೋರಿದರು.
ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಭಾಪತಿಗಳಾದ ಬಸವರಾಜ ಹೊರಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.




