ನವದೆಹಲಿ: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಬರೋಬ್ಬರಿ ಒಂದು ತಿಂಗಳ ಕಾಲ ನಡೆಯಲಿದೆ.
ಅಧಿವೇಶನದಲ್ಲಿ ಅಮಾಯಕ ಜನರ ಮೇಲೆ ದಾಳಿ ಮಾಡಿದ ಉಗ್ರರು, ಆಪರೇಷನ್ ಸಿಂಧೂರ, ವಿಮಾನ ದುರಂತ, ಬಿಹಾರ ಮತದಾರರ ಪಟ್ಟಿ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಜ್ಜಾಗಿವೆ.
ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಬಗ್ಗೆ ಪ್ರಧಾನಿ ಮೋದಿ ಅಧಿವೇಶನದಲ್ಲಿ ಸ್ಪಷ್ಟನೆ ನೀಡಬೇಕೆಂದು ಸರ್ವಪಕ್ಷ ಸಭೆಯಲ್ಲಿ ವಿಪಕ್ಷಗಳು ಒತ್ತಾಯಿಸಿವೆ. ಕೇಂದ್ರ ಸರ್ಕಾರ ಕೂಡ ಪ್ರತಿಪಕ್ಷಗಳ ಆರೋಪಕ್ಕೆ ತಕ್ಕ ಪ್ರತಿಕ್ರಿಯೆ ನೀಡಲು ಕಾರ್ಯತಂತ್ರ ರೂಪಿಸಿದೆ.
ಪ್ರಧಾನಿ ಮೋದಿ ಅವರಿಂದ ಉತ್ತರಕ್ಕೆ ವಿಪಕ್ಷಗಳು ಪಟ್ಟು ಹಿಡಿಯುವ ಸಾಧ್ಯತೆ ಇದೆ. ಮೋದಿಯವರ ಬದಲಾಗಿ ವಿದೇಶಾಂಗ ಸಚಿವರು, ರಕ್ಷಣಾ ಸಚಿವರು, ಗೃಹ ಸಚಿವರು ವಿಪಕ್ಷಗಳಿಗೆ ಉತ್ತರ ನೀಡುವ ಸಾಧ್ಯತೆ ಇದೆ.




