ಬೆಳಗಾವಿ : ಪತ್ನಿ ಎದುರೇ ವ್ಯಕ್ತಿಯೊಬ್ಬ ಕುಡುಗೋಲಿನಿಂದ ಕತ್ತು ಕೊಯ್ದುಕೊಂಡು ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮದಲ್ಲಿ ನಡೆದಿದೆ.
ಮಲ್ಲಪ್ಪ ಎಂಬುವರು ಕುಡುಗೋಲಿನಿಂದ ಕತ್ತು ಕೊಯ್ದುಕೊಂಡು ಸಾವನ್ನಪ್ಪಿದ್ದಾರೆ.ನೀನು ಸತ್ತರೆ ಅಕ್ಕ ಚೆನ್ನಾಗಿರ್ತಾಳೆ ಎಂದು ಭಾಮೈದ ಹೇಳಿದಕ್ಕೆ, ಮಲ್ಲಪ್ಪ ಹೆಂಡತಿ ಎದುರೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪತ್ನಿ ರೇಖಾ, ಬಾಮೈದ ಮಲ್ಲಿಕಾರ್ಜುನ್ ಜೊತೆಗೆ ಜಗಳ ಮಾಡಿಕೊಂಡು ಮಲ್ಲಪ್ಪ ಕುಡಗೋಲಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




