ಸಿರುಗುಪ್ಪ : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕಾಡಳಿತ, ಪೋಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ನಡೆದ ವಿಶ್ವ ಮಾನವ ಕಳ್ಳಸಾಗಣೆ ವಿರೋಧಿ ದಿನಾಚರಣೆಯ ಕಾರ್ಯಕ್ರಮವನ್ನು ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ಅಶೋಕ್.ಆರ್.ಹೆಚ್, ಅವರು ಉದ್ಘಾಟಿಸಿದರು.

ನಂತರ ಮಾತನಾಡಿ ಮಾನವ ಕಳ್ಳ ಸಾಗಾಣಿಕೆಯು ಇಡೀ ಮನುಷ್ಯ ಕುಲಕ್ಕೆ ಸವಾಲಾಗಿರುವ ಸಮಸ್ಯೆಯಾಗಿದೆ.ಆದ್ದರಿಂದ ನಾವೆಲ್ಲರೂ ಸೇರಿ ಇದನ್ನು ವಿರೋಧಿಸಬೇಕಾಗಿದೆ. ಪ್ರಪಂಚದಾದ್ಯಂತ ಮಾನವ ಕಳ್ಳ ಸಾಗಾಣಿಕೆ ದಿನವನ್ನು ಆಚರಿಸಲಾಗುತ್ತಿದೆ.
ವಿದ್ಯಾವಂತರಾದ ನಿಮ್ಮ ಮೂಲಕ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾಲೇಜಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಉಪ್ಪಾರ ವೆಂಕೋಬ ಅವರು ಮಾತನಾಡಿ 2016 ಜುಲೈ 30ನೇ ತಾರೀಖಿನಿಂದ ವಿಶ್ವ ಮಾನವ ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆ ಜಾರಿಗೆ ಬಂದಿದ್ದು, ನಾವೆಲ್ಲರೂ ಇದರ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವದರೊಂದಿಗೆ ಮಾನವ ಕಳ್ಳ ಸಾಗಾಣಿಕೆಯನ್ನು ತಡೆಯಬೇಕಿದೆಂದು ತಿಳಿಸಿದರು.
ಇದೇ ವೇಳೆ ಸರ್ಕಾರಿ ಸಹಾಯಕ ಅಭಿಯೋಜಕರಾದ ಶಿವರಾಜ್, ಉಪ ತಹಶೀಲ್ದಾರ್ ಸಿದ್ದಾರ್ಥ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಮ್.ಸಿದ್ದಯ್ಯ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ ವರ್ಮ, ದೈಹಿಕ ಶಿಕ್ಷಣಾಧಿಕಾರಿ ರಮೇಶ್, ವಕೀಲರ ಸಂಘದ ಕಾರ್ಯದರ್ಶಿ ಶಿವಕುಮಾರ್.ಎಮ್, ಸಿಪಿಐ ಹನುಮಂತಪ್ಪ, ಕಾಲೇಜಿನ ಪ್ರಾಚಾರ್ಯರಾದ ನಾಗರಾಜ.ಹೆಚ್, ಸೇರಿದಂತೆ ಇನ್ನಿತರ ಹಿರಿಯ ವಕೀಲರು ಹಾಗೂ ವಿದ್ಯಾರ್ಥಿಗಳು ಇದ್ದರು.
ವರದಿ : ಶ್ರೀನಿವಾಸ ನಾಯ್ಕ




