Ad imageAd image

ಆ. ೨ ರಂದು ವಾಣಿಜ್ಯ ರತ್ನ ಪ್ರಶಸ್ತಿ ಪ್ರದಾನ

Bharath Vaibhav
ಆ. ೨ ರಂದು ವಾಣಿಜ್ಯ ರತ್ನ ಪ್ರಶಸ್ತಿ ಪ್ರದಾನ
WhatsApp Group Join Now
Telegram Group Join Now

ಹುಬ್ಬಳ್ಳಿ : ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ೯೭ ನೇ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ವಾಣಿಜ್ಯ ರತ್ನ ಪ್ರಶಸ್ತಿಯನ್ನು ಅಗಸ್ಟ್ ೨ ರಂದು ನಗರದ ಅಮರಗೋಳದ ಎಪಿಎಂಸಿಯ ಹುಧಾ ವಿವಿಧೋದ್ದೇಶ ವಸ್ತು ಪ್ರದರ್ಶನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷರಾದ ಎಸ್.ಪಿ.ಸಂಶಿಮಠ ತಿಳಿಸಿದರು.

ನಗರದಲ್ಲಿ ಮಾತನಾಡಿದ ಅವರು, ಅಂದು ಸಂಜೆ ೪ ಗಂಟೆಗೆ ಕಾರ್ಯಕ್ರಮ ಇರಲಿದೆ. ಉದ್ಯಮಿಗಳಾದ ಜಯಂತ ಅಶೋಕ ಹುಂಬರವಾಡಿ, ಪ್ರಕಾಶ ಬಾಫನಾ, ರವೀಂದ್ರಕುಮಾರ್ ಬೆಕನಾಳ, ಶರಣಬಸಪ್ಪ ಸಂಗಪ್ಪ ಗುಡಿಮನಿ, ಸಿದ್ದಣ್ಣ ಈಶ್ವರಪ್ಪ ನಾಲವಾಡ, ದೇವಕಿ ಯೋಗಾನಂದ ಅವರಿಗೆ ವಾಣಿಜ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷರಾದ ಎಸ್.ಪಿ.ಸಂಶಿಮಠ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜೆಎಸ್ ಡಬ್ಲ್ಯೂ ಸಿಮೆಂಟ್, ಪೇಂಟ್ಸ್ ವ್ಯವಸ್ಥಾಪಕ ನಿರ್ದೇಶಕರು ಹಾ್ಐ ಜೆಎಸ್ ಡಬ್ಲ್ಯೂ ಎನರ್ಜಿ ನಿರ್ದೇಶಕರಾದ ಪಾರ್ಥ ಜಿಂದಾಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಗೌರವ ಕಾರ್ಯದರ್ಶಿ ರವೀಂದ್ರ ಬಳಿಗಾರ, ಉಪಾಧ್ಯಕ್ಷರಾದ ಸಂದೀಪ ಬಿಡಸಾರಿಯಾ, ಪ್ರವೀಣ ಅಗಡಿ, ವಿರೇಶ್ ಮೊಟಗಿ, ಗೌರವ ಕಾರ್ಯದರ್ಶಿ ಮಹೇಂದ್ರ ಸಿಂಘಿ ಪಾಲ್ಗೊಂಡಿದ್ದರು.

 ಹುಬ್ಬಳ್ಳಿ : ಸುಧೀರ್ ಕುಲಕರ್ಣಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!